ಬಿಹಾರಿಗಳ ಕುರಿತು ಹೇಳಿಕೆ; ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು

ಪಾಟ್ನಾ, ಏಪ್ರಿಲ್ 1: ಬಿಹಾರಿಗಳ ಕುರಿತು ಈಚೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಸಮಾವೇಶದಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ಮಾತನಾಡುತ್ತಾ, "ಪಶ್ಚಿಮ ಬಂಗಾಳಕ್ಕೆ ಬಿಹಾರದಿಂದ ಗೂಂಡಾಗಳನ್ನು ಕರೆಸಲಾಗಿದೆ. ಮತದಾರರನ್ನು ಬೆದರಿಸಲು ಬಿಹಾರ ಹಾಗೂ ಉತ್ತರ ಪ್ರದೇಶದ ಗೂಂಡಾಗಳು ನಂದಿಗ್ರಾಮಕ್ಕೆ ಬಂದು ನೆಲೆಯೂರಿದ್ದಾರೆ. ಬಲರಾಂಪುರ ಹಾಗೂ ಇತರ ಗ್ರಾಮಸ್ಥರನ್ನು ಬೆದರಿಸುತ್ತಿದ್ದಾರೆ" ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಈ ಕುರಿತು ಚುನಾವಣಾ ಆಯೋಗ ಕ್ರಮ ವಹಿಸಬೇಕು ಎಂದು ಕೇಳಿಕೊಂಡಿದ್ದರು. ಈ ಹೇಳಿಕೆಗೆ ವಿರುದ್ಧವಾಗಿ ಮಮತಾ ಬ್ಯಾನರ್ಜಿ ವಿರುದ್ಧ ಬಿಹಾರದ ಮುಜಪ್ಪರಪುರ ವಕೀಲ ಸುಧೀರ್ ಕುಮಾರ್ ಓಜಾ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ದೂರು ನೀಡಿದ್ದಾರೆ. ಮಮತಾ ಬ್ಯಾನರ್ಜಿ ಬಿಹಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

Complaint Against West Bengal CM Mamata Banerjee In Bihar

ಏಪ್ರಿಲ್ 8ರಂದು ಈ ಕುರಿತು ವಿಚಾರಣೆ ನಡೆಯುವುದಾಗಿ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+