ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ 15 ದಿನಗಳ ಸಂಪೂರ್ಣ ಲಾಕ್ ಡೌನ್

|
Google Oneindia Kannada News

ಪಾಟ್ನಾ, ಜುಲೈ 14 : ಬಿಹಾರದಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 18,853.

Recommended Video

PU Results : Udupi ವಿದ್ಯಾರ್ಥಿಗಳಿಗೆ ಅಭಿನಂದನೆಗಳು | Oneindia Kannada

ಮಂಗಳವಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಈ ಕುರಿತು ಮಾಹಿತಿ ನೀಡಿದ್ದಾರೆ. "ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ. ಈ ಕುರಿತು ಮಾರ್ಗಸೂಚಿ ಪ್ರಕಟವಾಗಲಿದೆ" ಎಂದು ಹೇಳಿದ್ದಾರೆ.

ಬಿಹಾರ ಬಿಜೆಪಿ ಕಚೇರಿಯಲ್ಲಿ 75 ಮುಖಂಡರಿಗೆ ಕೊರೊನಾ ಸೋಂಕುಬಿಹಾರ ಬಿಜೆಪಿ ಕಚೇರಿಯಲ್ಲಿ 75 ಮುಖಂಡರಿಗೆ ಕೊರೊನಾ ಸೋಂಕು

ಬಿಹಾರದಲ್ಲಿ ಜುಲೈ 16ರ ಗುರುವಾರದಿಂದ ಜುಲೈ 31ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಬುಧವಾರ ಲಾಕ್ ಡೌನ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಕೊರೊನಾ ಭೀತಿಯ ನಡುವೆಯೂ ಬಿಹಾರ ಚುನಾವಣೆ ಸಿದ್ಧತೆ ಕೊರೊನಾ ಭೀತಿಯ ನಡುವೆಯೂ ಬಿಹಾರ ಚುನಾವಣೆ ಸಿದ್ಧತೆ

Complete Lock Down In Bihar From July 16 To 31

ಭಾನುವಾರದಿಂದ ಬಿಹಾರದಲ್ಲಿ ಪ್ರತಿ ದಿನ 1000ಕ್ಕೂ ಅಧಿಕ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಭಾನುವಾರ ಒಂದೇ ದಿನ 1,266 ಹೊಸ ಪ್ರಕರಣ ದಾಖಲಾಗಿದ್ದು, ಇದು ರಾಜ್ಯದಲ್ಲಿ ಒಂದು ದಿನ ಕಂಡು ಬಂದ ಅತಿ ಹೆಚ್ಚು ಪ್ರಕರಣವಾಗಿತ್ತು.

ಕೊರೊನಾ ಹರಡುವಿಕೆ ತಡೆಯಲು ದಿಟ್ಟ ಹೆಜ್ಜೆ ಇಟ್ಟ ಬಿಹಾರ ಕೊರೊನಾ ಹರಡುವಿಕೆ ತಡೆಯಲು ದಿಟ್ಟ ಹೆಜ್ಜೆ ಇಟ್ಟ ಬಿಹಾರ

ಸೋಮವಾರ 1,432 ಕೊರೊನಾ ವೈರಸ್ ಸೋಂಕಿನ ಹೊಸ ಪ್ರಕರಣ ದಾಖಲಾಗಿತ್ತು. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,853ಕ್ಕೆ ಏರಿಕೆಯಾಗಿದೆ. ಇದುವರೆಗೂ ರಾಜ್ಯದಲ್ಲಿ 143 ಜನರು ಮೃತಪಟ್ಟಿದ್ದಾರೆ.

ಸೋಮವಾರ ದಾಖಲಾದ 1, 432 ಪ್ರಕರಣದಲ್ಲಿ ಪಾಟ್ನಾದಲ್ಲಿಯೇ 162 ಪ್ರಕರಣ ಪತ್ತೆಯಾಗಿತ್ತು. ಮಂಗಳವಾರ ಬಿಹಾರದ ಬಿಜೆಪಿ ಕಚೇರಿಯಲ್ಲಿ 20 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಪಕ್ಷದ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಇದನ್ನು ಖಚಿತಪಡಿಸಿದ್ದಾರೆ.

English summary
Bihar deputy chief minister Sushil Kumar Modi said that complete lockdown in Bihar from July 16 to 31, 2020. Total number of COVID - 19 cases in state 18,853.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X