ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಅಖಾಡದಲ್ಲಿ ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮತಬೇಟೆ

|
Google Oneindia Kannada News

ಪಾಟ್ನಾ, ಅಕ್ಟೋಬರ್.28: ಬಿಹಾರ ವಿಧಾನಸಭಾ ಚುನಾವಣಾ ಆಖಾಡದಲ್ಲಿ ಎರಡು ರಾಜಕೀಯ ಪಕ್ಷಗಳ ಇಬ್ಬರು ಪ್ರಮುಖ ನಾಯಕರು ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಇದೇ ದಿನ ಮತ್ತೊಂದು ಕಡೆಯಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಸಲಾಗುತ್ತಿದೆ.

ಎರಡನೇ ಹಂತದ ಮತದಾನ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಜನತಾ ದಳ(RJD) ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಸಂಸದ ರಾಹುಲ್ ಗಾಂಧಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ. ದರ್ಭಾಂಗ್ ಜಿಲ್ಲೆಯ ಕುಶೇಶ್ವರ ಅಸ್ಥಾನ್ ಮತ್ತು ವಾಲ್ಮೀಕಿ ನಗರ್ ಕ್ಷೇತ್ರಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

 Bihar Election 2020 Live Updates: ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ Bihar Election 2020 Live Updates: ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ

ಇನ್ನೊಂದು ಕಡೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ದರ್ಭಾಂಗ್, ಮುಜಾಫರ್ ಪುರ್ ಮತ್ತು ಪಾಟ್ನಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ ಅಕ್ಟೋಬರ್.23ರಂದು ಸಸಾರಮ್, ಗಯಾ, ಭಗಲ್ಪುರ್ ನಲ್ಲಿ ಪ್ರಧಾನಿ ಮೋದಿಯವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು.

ಬಿಹಾರ: ಮೊದಲ ಹಂತದಲ್ಲಿ 71 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಬಿಹಾರ: ಮೊದಲ ಹಂತದಲ್ಲಿ 71 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ

Congress Leader Rahul Gandhi Election Rallies In Valmikinagar And Kusheshwar Asthan

71 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್.28ರ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗದವರು ಸೇರಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ. 71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

English summary
Congress Leader Rahul Gandhi Election Rallies In Valmikinagar And Kusheshwar Asthan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X