• search
 • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜಕೀಯ ಆಟ: ಬಿಹಾರಕ್ಕೆ ಇಬ್ಬರು ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್

|

ಪಾಟ್ನಾ, ನವೆಂಬರ್.08: ಬಿಹಾರದ 243 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಹಂತಗಳ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮತದಾನೋತ್ತರ ಸಮೀಕ್ಷೆಗಳು ಹೊರ ಬಂದಿವೆ. ಮಹಾಘಟಬಂಧನ್ ಮೈತ್ರಿಕೂಟಕ್ಕೆ ಗದ್ದುಗೆ ದಕ್ಕುವುದು ಪಕ್ಕಾ ಎಂದು ಸಾಕಷ್ಟು ರಾಷ್ಟ್ರೀಯ ಸಂಸ್ಥೆಗಳು ನಡೆಸಿದ ಮತದಾನೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ರಾಷ್ಟ್ರೀಯ ಜನತಾ ದಳ(RJD) ಮತ್ತು ಕಾಂಗ್ರೆಸ್ ಮೈತ್ರಿಕೂಟಕ್ಕೆ ಅಧಿಕಾರ ಸಿಗುವುದು ನಿಶ್ಚಿತ ಎಂಬ ವರದಿಗಳು ಹೊರ ಬೀಳುತ್ತಿದ್ದಂತೆ ಅಖಿತ ಭಾರತ ಕಾಂಗ್ರೆಸ್ ಕಮಿಟಿ ಅಧ್ಯಕ್ಷೆ ಸೋನಿಯಾ ಗಾಂಧಿ ವೀಕ್ಷಕರನ್ನು ನೇಮಿಸಿದ್ದಾರೆ.

Todays Chanakya Exit Poll: ಮಹಾಘಟಬಂಧನ್ ಮೈತ್ರಿಕೂಟಕ್ಕೆ ಗದ್ದುಗೆ

ಬಿಹಾರದಲ್ಲಿ ಚುನಾವಣೋತ್ತರ ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ವಹಿಸಲು ಹಾಗೂ ನಿರ್ವಹಿಸುವುದಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸರ್ಜೇವಾಲಾ ಮತ್ತು ಅವಿನಾಶ್ ಪಾಂಡೆರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ನವೆಂಬರ್.10 ಫಲಿತಾಂಶದ ಮೇಲೆ ಕಣ್ಣು:

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಮೇಲೆ ಎಲ್ಲ ದೃಷ್ಟಿ ನೆಟ್ಟಿದೆ. ನವೆಂಬರ್.10ರಂದು 243 ಕ್ಷೇತ್ರಗಳ ರಾಜಕೀಯ ಭವಿಷ್ಯ ಹೊರಬೀಳಲಿದೆ. ಚುನಾವಣಾ ಫಲಿತಾಂಶ ಹೊರ ಬೀಳುವುದಕ್ಕೂ ಮೊದಲೇ ರಾಜಕೀಯ ಪಕ್ಷಗಳು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ಮುಂದಿನ ರಾಜಕೀಯ ತಂತ್ರಗಾರಿಕೆ ಮತ್ತು ಪ್ರಕ್ರಿಯೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಲಕ್ಷ್ಯ ನೆಟ್ಟಿದೆ.

ಬಿಹಾರ ಚುನಾವಣೋತ್ತರ ವೀಕ್ಷಕರನ್ನಾಗಿ ರಂದೀಪ್ ಸರ್ಜೇವಾಲಾ ಮತ್ತು ಅವಿನಾಶ್ ಪಾಂಡೆರನ್ನು ನೇಮಿಸಿದ್ದಾರೆ. ಭಾನುವಾರವೇ ಇಬ್ಬರೂ ರಾಜಕೀಯ ನಾಯಕರು ನವದೆಹಲಿಯಿಂದ ಪಾಟ್ನಾಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

   Bihar Election 3rd Phase: Ashwamesh Devi ಅಭ್ಯರ್ಥಿ ತಮ್ಮ ಮತ ಚಲಾಯಿಸಿದರು | Oneindia kannada

   2020ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ. ಅಕ್ಟೋಬರ್.28ರ ಮೊದಲ ಹಂತದಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್.03ರ ಎರಡನೇ ಹಂತದಲ್ಲಿ ಶೇ.53.51ರಷ್ಟು ಮತದಾನ ನಡೆದಿದೆ. ಶನಿವಾರ 3ನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ.

   English summary
   Congress General Secretaries Randeep Singh Surjewala And Avinash Pandey Appoints As Observers Of Bihar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X