• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ

|

ಪಾಟ್ನಾ, ಅಕ್ಟೋಬರ್.10: ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ಬಿಡುಗಡೆಗೊಳಿಸಿದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ 30 ಮಂದಿ ನಾಯಕರಿಗೆ ಸ್ಥಾನ ನೀಡಲಾಗಿದೆ.

ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಸಂಸದ ರಾಹುಲ್ ಗಾಂಧಿ, ಮೀರಾ ಕುಮಾರ್, ಗುಲಾಮ್ ನಬಿ ಆಜಾದ್, ಪ್ರಿಯಾಂಕಾ ಗಾಂಧಿ ವಾದ್ರಾ, ರಂದೀಪ್ ಸಿಂಗ್ ಸರ್ಜೇವಾಲಾ ಸೇರಿದಂತೆ ಒಟ್ಟು 30 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರಿಗೂ ಸ್ಥಾನ ನೀಡಲಾಗಿದೆ. ಶನಿವಾರವಷ್ಟೇ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು ಕೇಂದ್ರ ಚುನಾವಣಾ ಆಯೋಗವು 40 ರಿಂದ 30ಕ್ಕೆ ಇಳಿಕೆ ಮಾಡಿತ್ತು.

ಸ್ಟಾರ್ ಪ್ರಚಾರಕರ ಪಟ್ಟಿ ಸಲ್ಲಿಕೆಗೆ 10 ದಿನ:

ಉಪ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಅಂತಿಮಗೊಳಿಸಿ ಎಲ್ಲ ರಾಜ್ಯ ಚುನಾವಣಾ ಸಲ್ಲಿಸುವುದಕ್ಕೆ ರಾಜಕೀಯ ಪಕ್ಷಗಳಿಗೆ 10 ದಿನಗಳ ಗಡುವು ನೀಡಲಾಗಿದೆ. ಈ ಅವಧಿಯಲ್ಲಿ ಭಾರತದಲ್ಲಿ ಗುರುತಿಸಿದ ರಾಷ್ಟ್ರೀಯ ಪಕ್ಷಗಳಾಗ ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಸಿಪಿಐ, ಸಿಪಿಐಎಂ, ಬಿಎಸ್ ಪಿ, ಎನ್ ಸಿಪಿ, ಮತ್ತು ಎನ್ ಪಿಪಿ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸಲ್ಲಿಸಲು ಸೂಚಿಸಲಾಗಿದೆ.

ಉಪ ಚುನಾವಣೆ ಸ್ಟಾರ್ ಪ್ರಚಾರಕರ ಸಂಖ್ಯೆ ತಗ್ಗಿಸಿದ ಕೇಂದ್ರ ಆಯೋಗ

ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

English summary
Congress Releases List Of Star Campaigners For Upcoming Bihar Assembly Election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X