ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಟ್ನಾದಲ್ಲಿ ರಾರಾಜಿಸಿದ "ಡಬಲ್ ಇಂಜಿನ್" ಸರ್ಕಾರದ ಪೋಸ್ಟರ್!

|
Google Oneindia Kannada News

ಪಾಟ್ನಾ, ನವೆಂಬರ್.11: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಮತದಾರ ಸ್ಪಷ್ಟ ಬಹುಮತರು ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜಧಾನಿ ಪಾಟ್ನಾದಲ್ಲಿ ವಿಶೇಷ ಪೋಸ್ಟರ್ ಗಳು ರಾರಾಜಿಸುತ್ತಿವೆ.

ಬಿಹಾರ ಫಲಿತಾಂಶ: ನಿತೀಶ್ ಕುಮಾರ್‌ಗೆ ಕೈಕೊಟ್ಟ ಮಹಿಳಾ ಮತದಾರರು ಬಿಹಾರ ಫಲಿತಾಂಶ: ನಿತೀಶ್ ಕುಮಾರ್‌ಗೆ ಕೈಕೊಟ್ಟ ಮಹಿಳಾ ಮತದಾರರು

"ಡಬಲ್ ಇಂಜಿನ್ ಸರ್ಕಾರವು ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಿದೆ. ಗೊಂದಲವೇ ಬೇಕಿಲ್ಲ, ಇದೊಂದು ಶ್ರೇಷ್ಠ ಸಂಯೋಜನೆ" ಎಂದು ಬರೆದಿರುವ ಪೋಸ್ಟರ್ ಗಳನ್ನು ಹಾಕಲಾಗಿದೆ. ಈ ಪೋಸ್ಟರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಚಿತ್ರಗಳು ರಾರಾಜಿಸಿವೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆಯೂ ನಡೆಸಿದ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲಿದ್ದ ಸರ್ಕಾರಕ್ಕೆ ಮತದಾರರು ಬೆಂಬಲ ಸೂಚಿಸಿದ್ದಾರೆ. ನಾಲ್ಕನೇ ಅವಧಿಗೆ ಬಿಹಾರದ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಸ್ಪಷ್ಟ ಬಹುಮತಗಳೊಂದಿಗೆ ಆಯ್ಕೆಯಾಗಿದ್ದಾರೆ.

Double Engine Government Has Yet Again Created History: Posters Emerge In Patna


ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಬಹುಮತ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಈ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಅದರಲ್ಲಿ ರಾಷ್ಟ್ರೀಯ ಜನತಾ ದಳ 75, ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.

Recommended Video

ಹೆಂಡತಿಯ challenge ಒಪ್ಪಿ ತೇಜ್ ಎನ್ ಮಾಡಿದ್ರು ಗೊತ್ತಾ ? | Oneindia Kannada

English summary
Double Engine Government Has Yet Again Created History: Posters Emerge In Patna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X