ಬಿಹಾರದಲ್ಲಿ ಮೆದುಳು ಜ್ವರದಿಂದ ಒಂದೇ ತಿಂಗಳಲ್ಲಿ 57 ಮಕ್ಕಳ ಸಾವು
ಪಾಟ್ನಾ, ಜೂನ್ 14: ಬಿಹಾರದ ಮುಜಾಫರ್‌ಪುರದಲ್ಲಿ ಮೆದುಳು ಜ್ವರದಿಂದ ಒಂದೇ ತಿಂಗಳಲ್ಲಿ 57 ಮಕ್ಕಳು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.
ಬಿಹಾರದ ವಿವಿಧ ಆಸ್ಪತ್ರೆಗಳಲ್ಲಿ 12ಕ್ಕಿಂತಲೂ ಹೆಚ್ಚು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಕ್ಯೂಟ್ ಎನ್ಸಪಾಲಿಟಿಸ್ ಸಿಂಡ್ರೋಮ್ (ಎಇಎಸ್) ರೋಗದಿಂದ ಕಳೆದ 20-22ದಿನಗಳಿಂದ 57 ಮಕ್ಕಳು ಮೃತಪಟ್ಟಿದ್ದಾರೆ ಎಂದು ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಎಎನ್‌ಐಗೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಜೊತೆಗೆ ಸಭೆ ನಡೆಸಿ ಈ ರೋಗಕ್ಕೆ ಕಾರಣಗಳು ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ಆದರೆ ಆರೋಗ್ಯ ಅಧಿಕಾರಿಗಳು ಹೇಳುವ ಪ್ರಕಾರ ಎಇಎಸ್‌ನಿಂದ ಮಕ್ಕಳು ಮೃತಪಟ್ಟಿಲ್ಲ ಆದರೆ ರಕ್ತದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡುವ ಹೈಪೊಗ್ಲಿಸೆಮಿಯಾದಿಂದ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.












Click it and Unblock the Notifications