"ರೈತರು ಮತ್ತು ಉದ್ಯೋಗಕ್ಕಾಗಿ ಮಹಾಘಟಬಂಧನ್ ಗೆ ಮತ"

ಪಾಟ್ನಾ, ಅಕ್ಟೋಬರ್.28: ಬಿಹಾರ ವಿಧಾನಸಭಾ ಚುನಾವಣೆಯ ಮೊದಲನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ರೈತರು ಮತ್ತು ಉದ್ಯೋಗ ಸೃಷ್ಟಿಗಾಗಿ ಮಹಾಘಟಬಂಧನ್ ಗೆ ಮತ ನೀಡುವಂತೆ ಸಂಸದ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.

"ಈ ಬಾರಿ ಉದ್ಯೋಗ ಸೃಷ್ಟಿ, ರೈತರು ಮತ್ತು ಕಾರ್ಮಿಕರ ಉದ್ಧಾರಕ್ಕಾಗಿ ಮಹಾಘಟಬಂಧನ್ ಗೆ ನಿಮ್ಮ ಮತೆ ನೀಡಿ. ಬಿಹಾರದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವ ನಿಮಗೆಲ್ಲ ಶುಭಾಷಯಗಳು" ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದರ ಜೊತೆಗೆ ಎರಡನೇ ಹಂತದ ಮತದಾನ ನಡೆಯಲಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಜನತಾ ದಳ(RJD) ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಸಂಸದ ರಾಹುಲ್ ಗಾಂಧಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ. ದರ್ಭಾಂಗ್ ಜಿಲ್ಲೆಯ ಕುಶೇಶ್ವರ ಅಸ್ಥಾನ್ ಮತ್ತು ವಾಲ್ಮೀಕಿ ನಗರ್ ಕ್ಷೇತ್ರಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

For Farmers, Labours And Creation Of Employment Please Vote For Mahaghatabandhan

71 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್.28ರ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗದವರು ಸೇರಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ. 71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+