• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಸಿಎಂ ಜಿತಿನ್ ರಾಂ ಮಾಂಝಿ ಈಗ ಹಂಗಾಮಿ ಸ್ಪೀಕರ್

|
Google Oneindia Kannada News

ಪಾಟ್ನಾ, ನ.19: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 7ನೇ ಬಾರಿಗೆ ಇಂದು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸತತ ನಾಲ್ಕನೇ ಅವಧಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಉತ್ತರ ಪ್ರದೇಶ ಮಾದರಿಯಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬಿಹಾರ ಸಚಿವ ಸಂಪುಟ ಹೊಂದಿದೆ. ನಿತೀಶ್ ಅವರ ನಂತರ ತಾರ್ ಕಿಶೋರ್ ಪ್ರಸಾದ್, ರೇಣು ದೇವಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ಇಬ್ಬರು ಕೂಡಾ ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ನಡುವೆ ವಿಧಾನಸಭಾ ಸ್ಪೀಕರ್ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲದ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಆದರೆ, ಸದ್ಯಕ್ಕೆ ಮಾಜಿ ಸಿಎಂ ಜಿತಿನ್ ರಾಂ ಮಾಂಝಿ ಅವರು

ಜಿತಿನ್ ರಾಂ ಮಾಂಝಿ ಅವರು ನಿತೀಶ್ ಕುಮಾರ್ ಸಚಿವ ಸಂಪುಟ ಸೇರುವುದಿಲ್ಲ ಎಂದು ಘೋಷಿಸಿದ್ದಾರೆ. ಹೀಗಾಗಿ, ಮುಂದಿನ ಸ್ಪೀಕರ್ ಆಯ್ಕೆಯಾಗುವ ತನಕ ನವೆಂಬರ್ 23-24, 2020 ಅವಧಿಗೆ ಸಭಾಪತಿ ಸ್ಥಾನವನ್ನು ನಿಭಾಯಿಸಲಿದ್ದಾರೆ. ನವೆಂಬರ್ 23 ರಿಂದ ಹೊಸ ವಿಧಾನಸೌಧ ಭವನದಲ್ಲಿ ಸದನದ ಕಲಾಪಗಳು ಆರಂಭವಾಗಲಿದೆ.

ದೀರ್ಘಾವಧಿ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ನಿತೀಶ್ ಕುಮಾರ್ದೀರ್ಘಾವಧಿ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ನಿತೀಶ್ ಕುಮಾರ್

ಮಾಜಿ ಸಚಿವ ನಂದ ಕಿಶೋರ್ ಯಾದವ್ ಹಾಗೂ ಮಾಜಿ ಉಪ ಸಭಾಪತಿ ಅಮರೇಂದ್ರ ಪ್ರತಾಪ್ ಸಿಂಗ್ ಅವರ ಹೆಸರು ಸ್ಪೀಕರ್ ಸ್ಥಾನಕ್ಕೆ ಕೇಳಿ ಬಂದಿದೆ. ಬಿಜೆಪಿಗೆ ಸ್ಪೀಕರ್ ಸ್ಥಾನ ಲಭಿಸಲಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅಮರೇಂದ್ರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೃಷಿ, ಸಹಕಾರ, ಸಕ್ಕರೆ ಖಾತೆ ನಿಭಾಯಿಸಲಿದ್ದಾರೆ.

ಜೆಡಿಯು ಕಡಿಮೆ ಸ್ಥಾನ(43)ಗಳನ್ನು ಗಳಿಸಿದ್ದರೂ ಚುನಾವಣಾ ಪೂರ್ವ ಒಪ್ಪಂದದಂತೆ ನಿತೀಶ್ ಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ಬಿಜೆಪಿ ಬಿಟ್ಟುಕೊಟ್ಟಿದೆ. ಬಿಜೆಪಿ 74 ಸ್ಥಾನ ಗೆದ್ದಿದ್ದು, ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನ ಗಳಿಸಿದೆ. ಒಟ್ಟಾರೆ, ಸಿಎಂ ಸೇರಿ 37 ಮಂದಿ ತನಕ ನಿತೀಶ್ ಸಂಪುಟ ಸಂಖ್ಯೆ ಏರಿಸಬಹುದು.

ಹಾಲಿ ಸಚಿವ ಸಂಪುಟದ 24 ಸದಸ್ಯರ ಪೈಕಿ ಜೆಡಿಯು ಹಾಗೂ ಬಿಜೆಪಿ ಸೇರಿದಂತೆ 10 ಮಂದಿ ಸೋಲು ಕಂಡಿದ್ದಾರೆ. ಸುಶೀಲ್ ಮೋದಿ ಸೇರಿದಂತೆ 6 ಮಂದಿ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಹಾಲಿ ಬಿಹಾರ ಸಚಿವ ಸಂಪುಟದಲ್ಲಿ ಸಿಎಂ ನಿತೀಶ್, ಡಿಸಿಎಂ ಸುಶೀಲ್ ಮೋದಿ ಸೇರಿದಂತೆ 30 ಸಚಿವರಿದ್ದಾರೆ. ಈ ಪೈಕಿ 18 ಜೆಡಿಯು ಹಾಗೂ 12 ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ. ಈ ಬಾರಿಗೆ ಬಿಜೆಪಿಗೆ ಹೆಚ್ಚಿನ ಸಚಿವ ಸ್ಥಾನ ಸಿಗಲಿದೆ.

ಸಚಿವ ಸಂಪುಟ: ಗೃಹ ಖಾತೆ ನಿತೀಶ್‌ಗೆ, ತಾರ್ ಕಿಶೋರರಿಗೆ ವಿತ್ತಸಚಿವ ಸಂಪುಟ: ಗೃಹ ಖಾತೆ ನಿತೀಶ್‌ಗೆ, ತಾರ್ ಕಿಶೋರರಿಗೆ ವಿತ್ತ

ಬಿಹಾರದ 243 ವಿಧಾನಸಭಾ ಸದಸ್ಯ ಬಲವಿದ್ದು, ಯಾವದೇ ಪಕ್ಷಕ್ಕೆ ಸರ್ಕಾರ ರಚಿಸಲು ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳು ಬೇಕು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) 125 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.

English summary
Former Chief Minister Jitan Ram Manjhi has been sworn in as pro-tem Speaker of Bihar assembly informed to Raj bhavan today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X