Breaking; ಬೂಸ್ಟರ್ ಡೋಸ್ ಉಚಿತ; ಬಿಹಾರ ಘೋಷಣೆ

ಪಾಟ್ನಾ, ಏಪ್ರಿಲ್ 19; ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಅನುಮತಿ ನೀಡಿದೆ. ಬಿಹಾರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ಒಪ್ಪಿಗೆ ನೀಡಿದೆ.

18 ರಿಂದ 59 ವರ್ಷದೊಳಗಿನ ಎಲ್ಲರಿಗೂ ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ನೀಡುವುದಾಗಿ ಬಿಹಾರ ಸರ್ಕಾರ ಘೋಷಣೆ ಮಾಡಿದೆ. ರಾಜ್ಯದ ಆರೋಗ್ಯ ಸಚಿವ ಮಂಗಲ್ ಪಾಂಡೆ 5.25 ಕೋಟಿ ಜನರು ಈ ಘೋಷಣೆ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

Free Covid Booster Dose For Above 18 Years Of Age Announces Bihar

ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ನೀಡಲು 1314 ಕೋಟಿ ರೂ.ಗಳನ್ನು ವೆಚ್ಚ ಮಾಡಲು ಬಿಹಾರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬಿಸಿಎಫ್ ಅನುದಾನದ ಮೂಲಕ 583.43 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ.

ಬಿಹಾರ ಸರ್ಕಾರ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಈಗಾಗಲೇ ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುತ್ತಿದೆ. ಈಗ 18 ರಿಂದ 59ರ ವಯೋಮಾನದವರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡುವುದಾಗಿ ಘೋಷಣೆ ಮಾಡಿದೆ.

ಭಾರತದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಹಾರ ಸರ್ಕಾರ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಕೋವಿಡ್ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವ ಕುರಿತು ಸೂಚನೆ ನೀಡಿದ್ದಾರೆ.

ಮಂಗಳವಾರದ ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ಭಾರತದಲ್ಲಿ 24 ಗಂಟೆಯಲ್ಲಿ 1,247 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಸಕ್ರಿಯ ಪ್ರಕರಣಗಳು 11,860 ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+