ಗಾಯದ ಮೇಲೆ ಬರೆ, ಸಿಡಿಲಿನ ಆಘಾತದ ನಂತರ ಮಳೆ ಭೀತಿ
ಪಾಟ್ನಾ, ಜೂನ್ 25: ಸಿಡಿಲಿನ ಹೊಡೆತದಿಂದ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಗುರುವಾರದಂದು ಮೃತಪಟ್ಟವರ ಸಂಖ್ಯೆ 100ಕ್ಕೇರಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಗಾಯದ ಮೇಲೆ ಬರೆ ಎಳೆದಂತೆ ಬಿಹಾರದಲ್ಲಿ ಭಾರಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಬಿಹಾರದ ಕನಿಷ್ಠ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಸಿವಾನ್, ದರ್ಭಾಂಗ, ಅರಾರಿಯಾ, ಕಿಶಾನ್ ಗಂಜ್, ಸೀತಾಮರ್ಹಿ, ಗೋಪಾಲ್ ಗಂಜ್, ಸುಪಾಲ್ ಪ್ರದೇಶಲ್ಲಿ ಗುಡುಗು, ಸಿಡಿಲು, ಭಾರಿ ಗಾಳಿ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆಯ ದಾಮಿನಿ, ಇಂದರ್ ವಜ್ರ್ ಮುಂತಾದ ಮೊಬೈಲ್ ಆಪ್ ಬಳಸಿ ಸಿಡಿಲು, ಮಳೆ ಬಗ್ಗೆ ಮಾಹಿತಿ ಪಡೆಯಲು ಇಲಾಖೆ ಸೂಚಿಸಿದೆ. ಕಳೆದ ವರ್ಷ ಬಿಹಾರದಲಿ ಸಿಡಿಲಿನ ಆಘಾತಕ್ಕೆ 39 ಮಂದಿ ಬಲಿಯಾಗಿದ್ದರು. ಈ ಬಾರಿ ಹೆಚ್ಚಿನ ಮಂದಿ ಮನೆಯಿಂದ ಹೊರಗಡೆ ಇದ್ದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತರ ಪೈಕಿ ಅನೇಕರು ಬಲವಾದ ಮಳೆಯ ನಡುವೆ ಗದ್ದೆ, ಹೊಲಗಳಲ್ಲಿ ಕೆಲಸ ಮಾಡುತ್ತಿದ್ದರು. ರೈತಾಪಿ ಕುಟುಂಬದವರೇ ಹೆಚ್ಚು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಿಹಾರದ ಗೋಪಾಲ್‌ಗಂಜ್, ಸಿವಾನ್, ಮಧುಬನಿ, ಮೋತಿಹಾರಿ, ದರ್ಭಾಂಗದಲ್ಲಿ ಸಿಡಿಲಿಗೆ ಒಟ್ಟು 83 ಜನರು ಸಾವನ್ನಪ್ಪಿದ್ದಾರೆ. ಗೋಪಾಲ್‌ಗಂಜ್‌ನಲ್ಲಿ 13 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದೇ ಸಮಯದಲ್ಲಿ, ಸಿವಾನ್‌ನಲ್ಲಿ ಐದು ಜನರು ಸಾವನ್ನಪ್ಪಿದರು. ಮಧುಬನಿ ಮತ್ತು ಮೋತಿಹರಿಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ದರ್ಬಂಗದಲ್ಲೂ ವ್ಯಕ್ತಿಯೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಮೃತರ ಕುಟುಂಬಗಳಿಗೆ ಸಿಎಂ ನಿತೀಶ್ ಕುಮಾರ್ 4 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications