ಬಿಹಾರ 3ನೇ ಹಂತದ ಚುನಾವಣೆಯಲ್ಲಿ ಮತದಾನಕ್ಕೆ ಪ್ರಧಾನಿ ಮನವಿ

ಪಾಟ್ನಾ, ನವೆಂಬರ್.07: ಬಿಹಾರದ ಮೂರನೇ ಹಂತದ 78 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಹಿನ್ನೆಲೆ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

"ಬಿಹಾರದಲ್ಲಿ ನಡೆಯುತ್ತಿರುವ 3ನೇ ಹಂತದ ಚುನಾವಣಾ ಮತದಾನ ಪ್ರಕ್ರಿಯೆಯಲ್ಲಿ ಜನರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಆ ಮೂಲಕ ದಾಖಲೆಯ ಮತದಾನ ಮಾಡಬೇಕು ಎನ್ನುವುದು ನನ್ನ ಆಗ್ರಹವಾಗಿದೆ. ಕೊವಿಡ್-19 ಸೋಂಕು ಹರಡುವಿಕೆ ಆತಂಕದ ನಡುವೆ ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯನ್ನು ಪ್ರತಿಯೊಬ್ಬರು ಆಚರಿಸಬೇಕು. ಕೊರೊನಾವೈರಸ್ ಸೋಂಕಿನ ಕುರಿತು ಜಾಗೃತಿ ವಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಕೈಗಳಿಗೆ ಸ್ಯಾನಿಟೈಸರ್ ಬಳಸಬೇಕು ಹಾಗೂ ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕು" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರನೇ ಹಾಗೂ ಅಂತಿಮ ಹಂತದಲ್ಲಿ 16 ಜಿಲ್ಲೆಗಳ 78 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಬಾರಿ 2.35 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮೂರನೇ ಹಂತದ ಕಣದಲ್ಲಿ 382 ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 1204 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಪೈಕಿ 1094 ಪುರುಷ ಅಭ್ಯರ್ಥಿಗಳಾಗಿದ್ದರೆ, 110 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3ನೇ ಹಂತದಲ್ಲಿ ಒಟ್ಟು 2,35 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಈ ಪೈಕಿ 1.23 ಕೋಟಿ ಪುರುಷ ಹಾಗೂ 1.12ರಷ್ಟು ಮಹಿಳಾ ಮತದಾರರಿದ್ದಾರೆ.

I Request All Voters To Participate In This Festival Of Democracy In Large Numbers

ಯಾವ ಪಕ್ಷದ ಎಷ್ಟು ಅಭ್ಯರ್ಥಿಗಳು?:

ಬಿಹಾರದಲ್ಲಿ ಅಂತಿಮ ಹಂತದ ಚುನಾವಣಾ ಕಣದಲ್ಲಿ ರಾಷ್ಟ್ರೀಯ ಜನತಾ ದಳದ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. 78 ಕ್ಷೇತ್ರಗಳ ಪೈಕಿ ಆರ್ ಜೆಡಿ 46 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, 42 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಲೋಕಜನಶಕ್ತಿ ಪಕ್ಷವು 2ನೇ ಸ್ಥಾನದಲ್ಲಿದೆ. ಜೆಡಿಯು 37, ಬಿಜೆಪಿ 35, ಎನ್ ಸಿಪಿ 31, ಕಾಂಗ್ರೆಸ್ 25, ರಾಷ್ಟ್ರೀಯ ಲೋಕ ಸಮತಾ ಪಕ್ಷ 23, ಬಹುಜನ ಸಮಾಜವಾದಿ ಪಕ್ಷ 19 ಹಾಗೂ ಸಿಪಿಐ ಪಕ್ಷದ ಇಬ್ಬರು ಅಭ್ಯರ್ಥಿಗಳು ಕಣದಲ್ಲಿ ಸ್ಪರ್ಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+