ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಿಹಾರ ರಾಜಕೀಯ, ದೇವೇಗೌಡರ ಟ್ವೀಟ್ ಸಂದೇಶ

|
Google Oneindia Kannada News

ಬೆಂಗಳೂರು, ಆಗಸ್ಟ್ 9: ಬಿಹಾರದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯವು ಜನತಾದಳ ಪರಿವಾರ ಒಂದೇ ಸೂರಿನಡಿ ಇದ್ದ ದಿನಗಳನ್ನು ಯೋಚಿಸುವಂತೆ ಮಾಡುತ್ತಿದೆ. ಈ ಜನತಾ ಪರಿವಾರವೇ ದೇಶಕ್ಕೆ ಮೂರು ಪ್ರಧಾನಮಂತ್ರಿಗಳನ್ನು ನೀಡಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಬಿಹಾರ ಸಿಎಂಗೆ ಆಪ್ತರಿಂದಲೇ ಅಪಾಯ: ಹೀಗೆ ಹೇಳಿದ್ದೇಕೆ ಚಿರಾಗ್ ಪಾಸ್ವಾನ್?ಬಿಹಾರ ಸಿಎಂಗೆ ಆಪ್ತರಿಂದಲೇ ಅಪಾಯ: ಹೀಗೆ ಹೇಳಿದ್ದೇಕೆ ಚಿರಾಗ್ ಪಾಸ್ವಾನ್?

ವಾಸ್ತವದಲ್ಲಿ ಯುವ ಪೀಳಿಗೆಯು ಒಂದು ನಿರ್ಧಾರಕ್ಕೆ ಬಂದರೆ ಈ ದೇಶಕ್ಕೆ ಉತ್ತಮ ಪರ್ಯಾಯವನ್ನು ನೀಡುವುದಕ್ಕೆ ಸಾಧ್ಯವಾಗುತ್ತದೆ. ಜನತಾ ಪರಿವಾರವು ಬಿಜೆಪಿಗೆ ಪರ್ಯಾಯವಾಗಿ ಬೆಳೆಯಬಹುದಾದ ಶಕ್ತಿಯನ್ನು ಹೊಂದಿದೆ ಎಂದು ದೇವೇಗೌಡರು ಹೇಳಿದ್ದಾರೆ.

Janata Dal parivar gave Three PMs to india; Ex-PM HD Devegowda reaction on Bihar Political developments

ಲಾಲೂ ಜೊತೆಗೆ ಕೈ ಜೋಡಿಸಿದ ನಿತೀಶ್: ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿ ಜೊತೆಗಿನ ಮೈತ್ರಿಯನ್ನು ನಿತೀಶ್ ಕುಮಾರ್ ಮುರಿದಿದ್ದು, ಲಾಲೂ ಪ್ರಸಾದ್ ಯಾದವ್‌ರ ಆರ್‌ಜೆಡಿ ಪಕ್ಷದೊಂದಿಗೆ ದೋಸ್ತಿ ಮಾಡಿದ್ದಾರೆ.

ಆರ್ ಜೆಡಿ ಸೇರಿದಂತೆ ಇತರೆ ಪಕ್ಷಗಳು ಮತ್ತು ಶಾಸಕರ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ನಿತೀಶ್ ಕುಮಾರ್ ಸಿದ್ಧವಾಗಿದ್ದಾರೆ. ಮಂಗಳವಾರ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೊಸ ಸರ್ಕಾರ ರಚನೆಗೆ ಶಾಸಕರ ಬೆಂಬಲವಿರುವ ಪತ್ರ ನೀಡಿದ್ದಾರೆ.

ಬಿಹಾರದ ಮುಖ್ಯಮಂತ್ರಿ ಆಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಆಗಿ ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಬುಧವಾರವೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಪಾಟ್ನಾದ ರಾಜಭವನದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ನೂತನ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

English summary
Janata Dal parivar gave Three PMs to india; Ex-PM HD Devegowda reaction on Bihar Political developments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X