ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದ 115 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಯು ಸ್ಪರ್ಧೆ

|
Google Oneindia Kannada News

ಪಾಟ್ನಾ, ಆಕ್ಟೋಬರ್.06: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನಾಯಕತ್ವದ ಜೆಡಿಯು ಪಕ್ಷವು 115 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾಡನಾಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಜೊತೆಗೂಡಿ ಚುನಾವಣೆ ಎದುರಿಸುವುದಾಗಿ ತಿಳಿಸಿದರು. ಎನ್ ಡಿಎ ಜೊತೆಗೆ ಮಾಡಿಕೊಂಡ ಒಪ್ಪಂದದಂತೆ ಜೆಡಿಯು 122 ಸ್ಥಾನಗಳನ್ನು ಪಡೆದುಕೊಂಡಿದೆ ಎಂದರು.\

ಬಿಹಾರ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು 50:50 ಸೀಟು ಹಂಚಿಕೆ ಬಿಹಾರ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು 50:50 ಸೀಟು ಹಂಚಿಕೆ

ಜೆಡಿಯು ಪಡೆದ 122 ವಿಧಾನಸಭಾ ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳನ್ನು ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಬಿಜೆಪಿ ಪಡೆದುಕೊಂಡ 122 ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳನ್ನು ವಿಕಾಸಶೀಲ ಇನ್ಸಾನ್ ಪಕ್ಷಕ್ಕೆ ಬಿಟ್ಟುಕೊಡಲಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

JD(U) Decided To Contest On 115 Seats In Upcoming Bihar Assembly Elections

ನಮ್ಮ ಅಭಿವೃದ್ಧಿ ಕಾರ್ಯವನ್ನು ತೋರಿಸಿ ಮತ ಕೇಳುತ್ತೇವೆ:

ಕಾಂಗ್ರೆಸ್ ಮತ್ತು ಆರ್ ಜೆಡಿ ಮೈತ್ರಿಕೂಟದ ವಿರುದ್ಧ ಸಿಎಂ ನಿತೀಶ್ ಕುಮಾರ್ ಕಿಡಿ ಕಾರಿದ್ದಾರೆ. ಬಿಹಾರದಲ್ಲಿ ಈ ಹಿಂದೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿರಲಿಲ್ಲ. ಕನಿಷ್ಠಪಕ್ಷ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಶಿಕ್ಷಕರಿಗೆ ತಿಂಗಳ ವೇತನ ಕೂಡಾ ಸಿಗುತ್ತಿರಲಿಲ್ಲ. ಆದರೆ ಇಂದು ರಾಜ್ಯದ ಪರಿಸ್ಥಿತಿ ಬದಲಾಗಿದೆ. ನಾವು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಹೇಳಿ ನಾವು ಮತವನ್ನು ಕೇಳುತ್ತೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ನಿತೀಶ್ ಕುಮಾರ್ ಜೊತೆ ಧ್ವನಿಗೂಡಿಸಿದ ಬಿಜೆಪಿ ಅಧ್ಯಕ್ಷ:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಧ್ವನಿಗೂಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ-ಜೆಡಿಯು ಪಕ್ಷಗಳು ಜೊತೆಯಾಗಿ ಚುನಾವಣೆ ಎದುರಿಸುತ್ತವೆ. ಮುಂದಿನ ದಿನಗಳಲ್ಲೂ ನಾವು ಒಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಅವರು ತಿಳಿಸಿದ್ದಾರೆ.

English summary
JD(U) Decided To Contest On 115 Seats In Upcoming Bihar Assembly Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X