• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡುಮ್ಕಾ ಖಜಾನೆ ಪ್ರಕರಣ: ಡಿ.11ಕ್ಕೆ ಲಾಲೂ ಜಾಮೀನು ಅರ್ಜಿ ವಿಚಾರಣೆ

|

ರಾಂಚಿ, ನವೆಂಬರ್ 27: ಮೇವು ಹಗರಣದಲ್ಲಿ ಡುಮ್ಕ ಖಜಾನೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಡಿಸೆಂಬರ್ 11ಕ್ಕೆ ಮುಂದೂಡಿದೆ.

1992-93 ಚಾಯಿಬಾಸಾ ಖಜಾನೆಯಿಂದ 33.67 ಕೋಟಿ ರೂ. ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಅಧ್ಯಕ್ಷ ಲಾಲೂ ಸೇರಿ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಬಿಜೆಪಿ ಶಾಸಕರಿಗೆ ಫೋನ್ ಕರೆ; ಲಾಲೂ ಪ್ರಸಾದ್ ಯಾದವ್ ವಿರುದ್ಧ ಎಫ್‌ಐಆರ್

ಡುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ 2. 7 ವರ್ಷಗಳ ಜೈಲು ಶಿಕ್ಷೆಗೊಳಗಾಗಿದ್ದು, ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದರು. ನಾಲ್ಕು ಬಹುಕೋಟಿ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಆರೋಪಿಯಾಗಿದ್ದಾರೆ.

ಆದಾಗ್ಯೂ, ನಾಲ್ಕು ಪ್ರಕರಣದ ಪೈಕಿ ಒಂದರಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಅನಾರೋಗ್ಯದ ನೆಲೆಯಲ್ಲಿ ಎರಡನೇ ಮೇವು ಹಗರಣದಲ್ಲಿ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಪ್ರಸ್ತತ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಲಾಲು ಪ್ರಸಾದ್ ಯಾದವ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾಲು ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಪಶುಸಂಗೋಪನಾ ಇಲಾಖೆಯಲ್ಲಿ 900 ಕೋಟಿ ಮೊತ್ತದ ಮೇವು ಹಗರಣ ನಡೆದಿತ್ತು.

English summary
The Jharkhand High Court On Friday Deffered to December 11 hearing on the bail plea of former chief minister Lalu Prasad Yadav in Connection with fodder scam case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X