• search
 • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರದಲ್ಲಿ ಪತ್ನಿಯನ್ನು ಸಿಎಂ ಮಾಡಿದ್ದೇ ಲಾಲೂ ಸಾಧನೆ: ಸಿಎಂ ನಿತೀಶ್ ಕುಮಾರ್

|

ಪಾಟ್ನಾ, ಅಕ್ಟೋಬರ್.17: ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ನಾಯಕರ ವಾಗ್ಯುದ್ಧ ಮುಂದುವರಿದಿದೆ. ಜೆಡಿಯು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಸಿಎಂ ನಿತೀಶ್ ಕುಮಾರ್, ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

ಕಳೆದ 15 ವರ್ಷಗಳಲ್ಲಿ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿ ಕುರ್ಚಿ ಮೇಲೆ ಕೂರಿಸಿದ್ದನ್ನು ಬಿಟ್ಟರೆ, ರಾಜ್ಯದ ಮಹಿಳೆಯರ ಶ್ರೇಯೋಭಿವೃದ್ಧಿ ಲಾಲೂ ಪ್ರಸಾದ್ ಯಾದವ್ ಆಗಲಿ, ರಾಷ್ಟ್ರೀಯ ಜನತಾ ಪಕ್ಷದ ಸರ್ಕಾರವಾಗಲಿ ಯಾವ ಕೆಲಸವನ್ನು ಮಾಡಿದೆ ಎಂದು ಸಿಎಂ ನಿತೀಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ವಕ್ತಾರ ಸ್ಥಾನದಿಂದ ಖುಷ್ಬೂ ತೆಗೆದು ಹಾಕಿದ ಕಾಂಗ್ರೆಸ್!

   ಲಸಿಕೆ ಸಿಗತ್ತೋ ಇಲ್ವೋ ಗೊತ್ತಿಲ್ಲಾ ! ಆದ್ರೆ ಇದು ಮಾತ್ರ Ready ಇರ್ಬೇಕು | Oneindia Kannada

   ಯಾವುದೇ ನಾಯಕರ ಹೆಸರನ್ನು ಉಲ್ಲೇಖಿಸದೇ ಸಿಎಂ ನಿತೀಶ್ ಕುಮಾರ್ ವಾಗ್ದಾಳಿ ಮುಂದುವರಿಸಿದರು. ಇಂದು ಬಿಹಾರ ವಿಧಾನಸಭಾ ಚುನಾವಣೆಗಾಗಿ ನನ್ನ ವಿರುದ್ಧ ಸಾಕಷ್ಟು ಯುವ ನಾಯಕರು ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ. ಆದರೆ ರಾಜಕಾರಣದ ವರ್ಣಮಾಲೆಗಳ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲದೇ ಪ್ರಚಾರ ನಡೆಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಕಿಡಿ ಕಾರಿದ್ದಾರೆ.

   ಪ್ರಚಾರದ ಗೀಳಿಗಾಗಿ ಹಗಲು ರಾತ್ರಿ ಆರೋಪ:

   ಬಿಹಾರ ವಿಧಾನಸಭಾ ಚುನಾವಣಾ ಕಣದಲ್ಲಿ ಕೆಲವು ನಾಯಕರಿಗೆ ಪ್ರಚಾರದ ಗೀಳು ಅಂಟಿಕೊಂಡಿದೆ. ಹೀಗಾಗಿ ಹಗಲು-ರಾತ್ರಿ ನನ್ನ ವಿರುದ್ಧ ಮೇಲಿಂದ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ನಿತೀಶ್ ಕುಮಾರ್ ತಮ್ಮ ವಿರೋಧ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

   ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

   English summary
   Lalu Prasad Yadav Was Any Scheme For Women Apart From Putting Wife On CM Chair: Nitish Kumar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X