ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದ LJP ಮುಖ್ಯಸ್ಥ ಚಿರಾಗ್ ಪಾಸ್ವಾನ್!

|
Google Oneindia Kannada News

ಪಾಟ್ನಾ, ಅಕ್ಟೋಬರ್.17: ರಾಜಕಾರಣದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳಲ್ಲ. ಬಿಹಾರ ವಿಧಾನಸಭಾ ಕಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಈ ಮಾತನ್ನು ಸತ್ಯ ಎನ್ನುವಂತೆ ಎತ್ತಿ ತೋರಿಸುತ್ತಿವೆ. ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷವು ಇದೀಗ ಬಿಜೆಪಿ ಅಭ್ಯರ್ಥಿಗೆ ಶುಭ ಕೋರಿದ್ದಾರೆ.
ಜಾಮುವಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಶ್ರೇಯಸಿ ಸಿಂಗ್ ರಿಗೆ ಎಲ್ ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ತಮ್ಮ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದಾರೆ. ಈ ಬಗ್ಗೆ ಸ್ವತಃ ಚಿರಾಗ್ ಪಾಸ್ವಾನ್ ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

'ನಾನು ಮೋದಿಯ ಹನುಮಂತ, ಬೇಕಿದ್ದರೆ ಎದೆ ಸೀಳಿ ತೋರಿಸುತ್ತೇನೆ'
"ಬಿಜೆಪಿ ಅಭ್ಯರ್ಥಿಯಾಗಿ ಜಾಮುವಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಶ್ರೇಯಸಿ ಸಿಂಗ್ ಸಹೋದರಿಗೆ ನನ್ನ ಶುಭಾಷಯಗಳನ್ನು ತಿಳಿಸಲು ಬಯಸುತ್ತೇನೆ. ಈ ಬಿಜೆಪಿ ಅಭ್ಯರ್ಥಿಗೆ ಲೋಕ ಜನಶಕ್ತಿ ಪಕ್ಷದ ಕಾರ್ಯಕರ್ತರು ಬೆಂಬಲ ಸೂಚಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದು ಚಿರಾಗ್ ಪಾಸ್ವಾನ್ ಅವರು ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

LJP Chief Chirag Paswan Support BJP Shreyasi Singh, Who Contest From Jamui Assembly Constituency

Recommended Video

ಲಸಿಕೆ ಸಿಗತ್ತೋ ಇಲ್ವೋ ಗೊತ್ತಿಲ್ಲಾ ! ಆದ್ರೆ ಇದು ಮಾತ್ರ Ready ಇರ್ಬೇಕು | Oneindia Kannada

ಬಿಹಾರದಲ್ಲಿ ಬಿಜೆಪಿ, ಎಲ್ ಜೆಪಿಯಿಂದಲೇ ಬದಲಾವಣೆ:
ಬಿಹಾರದಲ್ಲಿ ಬದಲಾವಣೆ ಮತ್ತು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದ್ದಲ್ಲಿ ಅದಕ್ಕೆ ಭಾರತೀಯ ಜನತಾ ಪಕ್ಷ ಮತ್ತು ಲೋಕ ಜನಶಕ್ತಿ ಪಕ್ಷಗಳಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಚಿರಾಗ್ ಪಾಸ್ವಾನ್ ಟ್ವಿಟರ್ ನಲ್ಲಿ ತಮ್ಮ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. ಶನಿವಾರವಷ್ಟೇ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬದಸದಂತೆ ತಾಕೀತು ಮಾಡಿದ ನಾಯಕರಿಗೆ ಚಿರಾಗ್ ಪಾಸ್ವಾನ್ ತಿರುಗೇಟು ನೀಡಿದ್ದರು. ಪ್ರಧಾನಿ ಮೋದಿ ನಮ್ಮ ಹೃದಯದಲ್ಲಿದ್ದು, ಫೋಟೋ ಬಳಸಿಕೊಂಡು ಪ್ರಚಾರ ಮಾಡುವ ಅಗತ್ಯವಿಲ್ಲ ಎಂದಿದ್ದರು.
ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

English summary
LJP Chief Chirag Paswan Support BJP Shreyasi Singh, Who Contest From Jamui Assembly Constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X