ಬಿಹಾರ ಮಹಾಘಟಬಂಧನ್ ಗೆಲುವಿನ ಬಗ್ಗೆ ಪ್ರಜೆಗಳ ವರದಿ: ರಾಬ್ರಿ ದೇವಿ
ಪಾಟ್ನಾ, ನವೆಂಬರ್.03: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಎಲ್ಲ ಕಡೆಗಳಲ್ಲಿಯೂ ಮಹಾಘಟಬಂಧನ್ ಮೈತ್ರಿಕೂಟವೇ ಗೆಲುವು ದಾಖಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಭವಿಷ್ಯ ನುಡಿದಿದ್ದಾರೆ.
ರಾಜ್ಯದ 17 ಜಿಲ್ಲೆಗಳ 94 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಪಾಟ್ನಾದ 160ನೇ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ ಬಳಿಕ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಪ್ರತಿಕ್ರಿಯೆ ನೀಡಿದ್ದಾರೆ.
ಬಿಹಾರದ ಜನರು ಬದಲಾವಣೆ ಬಯಸಿದ್ದು, ಈ ಬಾರಿ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟದ ಗೆಲುವು ನಿಶ್ಚಿತವಾಗಿದೆ. ಈ ಬಗ್ಗೆ ನಮಗೆ ಆಂತರಿಕ ವರದಿಯಲ್ಲಿ ರಾಜ್ಯದ ಜನರ ಅಭಿಪ್ರಾಯ ಏನು ಎಂಬುದನ್ನು ನಾವು ಈಗಾಗಲೇ ಕಂಡು ಕೊಂಡಿದ್ದೀವೆ ಎಂದು ರಾಬ್ರಿ ದೇವಿ ಹೇಳಿದರು.

ಬದಲಾವಣೆ ಬಗ್ಗೆ ತೇಜಸ್ವಿ ಯಾದವ್ ಮಾತು:
ಬಿಹಾರದಲ್ಲಿ ಬದಲಾವಣೆ ಬಯಸುತ್ತಿರುವ ಮತದಾರರು ಈ ನಿಟ್ಟಿನಲ್ಲಿ ತಮ್ಮ ಮತದಾನದ ಮೂಲಕ ಬದಲಾವಣೆ ತರುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಬಾರಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲಿದ್ದಾರೆ ಎಂದು ಹೇಳಿದರು. ಆ ಮೂಲಕ ಹೊಸ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
ಎರಡನೇ ಹಂತದಲ್ಲಿ 94 ಕ್ಷೇತ್ರಗಳಿಗೆ ಮತದಾನ:
ಎರಡನೇ ಹಂತದಲ್ಲಿ 17 ಜಿಲ್ಲೆಗಳ 94 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 2.85 ಕೋಟಿ ಜನ ಮತದಾರರು ಈ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬಿಹಾರ ಎರಡನೇ ಹಂತದ ಚುನಾವಣೆಯ ಕಣದಲ್ಲಿ 1463 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಪೈಕಿ 1316 ಪುರುಷ ಅಭ್ಯರ್ಥಿಗಳಾಗಿದ್ದರೆ, 146 ಮಹಿಳಾ ಅಭ್ಯರ್ಥಿಗಳಾಗಿದ್ದು, ಒಬ್ಬ ತೃತೀಯ ಲಿಂಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
2ನೇ ಹಂತದಲ್ಲಿ ಒಟ್ಟು 2,85,50,285 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, 1,50,33,034 ಪುರುಷರು ಮತ್ತು 1,35,16,271 ಮಹಿಳಾ ಮತದಾರರು ಹಾಗೂ 980 ತೃತೀಯ ಲಿಂಗದ ಮತದಾರರು ಮತದಾನ ಮಾಡಲಿದ್ದಾರೆ. ಮೂರನೇ ಹಂತದಲ್ಲಿ 15 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್.10ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶವು ಹೊರ ಬೀಳಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications