• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮಮಂದಿರ ನಿರ್ಮಾಣಕ್ಕೆ ಕೋಟ್ಯಂತರ ದೇಣಿಗೆ ಕೊಟ್ಟ ದೇಗುಲ

|

ಪಾಟ್ನಾ, ಫೆಬ್ರವರಿ 10: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಸ್ಥಾಪಿತವಾಗಿರುವ ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ಗೆ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ದೇಣಿಗೆ ಸಿಗುತ್ತಿದ್ದಂತೆ, ಮಂದಿರ ನಿರ್ಮಾಣ ಟ್ರಸ್ಟ್ ಅಧಿಕೃತವಾಗಿ ಶುರುವಾಗಿದೆ. ಇದೀಗ ಬಿಹಾರದ ಮಹಾವೀರ ದೇಗುಲದಿಂದ ದೇಗುಲ ನಿರ್ಮಾಣಕ್ಕಾಗಿ 10 ಕೋಟಿ ರು ದೇಣಿಗೆ ನೀಡಲಾಗಿದೆ.

ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ನ್ಯಾಯಪೀಠವು ನೀಡಿದ ತೀರ್ಪಿನ ಅನ್ವಯ ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಟ್ರಸ್ಟ್ ರಚಿಸಿದೆ. ಆದರೆ, ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಅನುದಾನವನ್ನು ನೀಡಿರಲಿಲ್ಲ. ಬದಲಿಗೆ ಸರ್ಕಾರದಿಂದ ಅಧಿಕೃತವಾಗಿ ಒಂದು ರುಪಾಯಿ ದೇಣಿಗೆ ನೀಡಲಾಗಿತ್ತು.

ಸುಪ್ರೀಂ ತೀರ್ಪು: ಅಯೋಧ್ಯಾ ಭೂ ವ್ಯಾಜ್ಯ ಅಂತ್ಯ, ಮಂದಿರ-ಮಸೀದಿಗೆ ಹಂಚಿಕೆ

ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ಡಿ.ಮುರ್ಮು ಅವರು ಒಂದು ರೂಪಾಯಿಯನ್ನು ಟ್ರಸ್ಟ್​ ಖಾತೆಗೆ ವರ್ಗಾವಣೆ ಮಾಡಿದ್ದರು. ನಂತರ, ಈ ಟ್ರಸ್ಟಿಗೆ ಸಾರ್ವಜನಿಕರು ಕೂಡಾ ದೇಣಿಗೆ ನೀಡಬಹುದು. ನಗದು ಅಥವಾ ಯಾವುದೇ ರೂಪದಲ್ಲಿ ದೇಣಿಗೆ ನೀಡಬಹುದು ಎಂದು ಘೋಷಿಸಿದ್ದರು.

ಒಟ್ಟು 10 ಕೋಟಿ ರು ನೀಡುತ್ತೇವೆ

ಒಟ್ಟು 10 ಕೋಟಿ ರು ನೀಡುತ್ತೇವೆ

"ರಾಮಮಂದಿರ ನಿರ್ಮಾಣಕ್ಕಾಗಿ ಕಂತು ಕಂತಿನಲ್ಲಿ ಹಣವನ್ನು ಟ್ರಸ್ಟ್ ಗೆ ಚೆಕ್ ಮೂಲಕ ನೀಡಲಾಗುತ್ತದೆ. ಮೊದಲ ಕಂತಿನಲ್ಲಿ 2 ಕೋಟಿ ರು ದೇಣಿಗೆ ನೀಡಲಾಗಿದೆ, ಒಟ್ಟು 10 ಕೋಟಿ ರು ನೀಡುತ್ತೇವೆ" ಎಂದು ಮಹಾವೀರ ದೇಗುಲ ಟ್ರಸ್ಟ್ ನ ಕುನಾಲ್ ಅವರು ಎಎನ್ಐಗೆ ತಿಳಿಸಿದರು.

ಶ್ರೀರಾಮನ ಮುದ್ರೆ, ಲಕ್ಷ್ಮಣ, ಸೀತಾದೇವಿ, ಹನುಮಾನ್ ಇರುವ 1818 ಇಸವಿಯ ನಾಣ್ಯಗಳನ್ನು ಸಂಗ್ರಹಿಸಲಾಗಿದ್ದು, ಇದನ್ನು ಅಯೋಧ್ಯೆಯ ರಾಮಮಂದಿರಕ್ಕೆ ನೀಡಲಾಗುತ್ತದೆ ಎಂದರು.

ರಾಮ ನಮಮಿ ದಿನದಿಂದ ಕಾಮಗಾರಿ

ರಾಮ ನಮಮಿ ದಿನದಿಂದ ಕಾಮಗಾರಿ

ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಮಂದಿರ ನಿರ್ಮಾಣ ಕಾಮಗಾರಿ ರಾಮ ನಮಮಿ ದಿನ(ಏಪ್ರಿಲ್ 02)ದಂದು ಆರಂಭವಾಗುವ ನಿರೀಕ್ಷೆ ಇದೆ. ರಾಮಮಂದಿರ ನಿರ್ಮಾಣಕ್ಕೆ ಸುಮಾರು 4 ವರ್ಷ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಮಂದಿರ ನಿರ್ಮಾಣಕ್ಕೆ ಈಗಾಗಲೇ 1.25 ಲಕ್ಷ ಘನ ಅಡಿ ಕಲ್ಲುಗಳ ಕೆತ್ತನೆ ಕಾರ್ಯ ಪೂರ್ಣಗೊಂಡಿದೆ ಎಂಬ ಮಾಹಿತಿಯಿದೆ. ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರವು ಟ್ರಸ್ಟ್ ಸ್ಥಾಪನೆ ಮಾಡಿದ್ದು,, 2024ರೊಳಗೆ ಮಂದಿರ ನಿರ್ಮಾಣವಾಗಲಿದ್ದು, ಶ್ರೀರಾಮಚಂದ್ರ ಮೂರ್ತಿಯ ದರ್ಶನ ಪ್ರಾಪ್ತಿಯಾಗಲಿದೆ" ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ್ ಕೊಕ್ಜೆ ಪ್ರತಿಕ್ರಿಯಿಸಿದ್ದಾರೆ.

ರಾಮಮಂದಿರ ಟ್ರಸ್ಟ್ ಸದಸ್ಯತ್ವ: ಉಡುಪಿ ಪೇಜಾವರ ಶ್ರೀಗಳಿಗೆ ಒಲಿದ ಗೌರವ

ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ಈ ಟ್ರಸ್ಟ್​​ನಲ್ಲಿ ಹಿರಿಯ ನ್ಯಾಯವಾದಿ ಕೆ.ಪರಾಸರನ್​, ಅಲಹಾಬಾದ್​​ನ ಜಗದ್ಗುರು ಶಂಕರಾಚಾರ್ಯ ಜ್ಯೋತಿಷ್​ಪೀಠಾಧೀಶ್ವರ ಸ್ವಾಮಿ ವಾಸುದೇವಾನಂದ ಸರಸ್ವತೀಜಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಹರಿದ್ವಾರದ ಯುಗಪುರುಷ ಪರಮಾನಂದ ಜೀ ಮಹಾರಾಜ್​, ಪುಣೆಯ ಸ್ವಾಮಿ ಗೋವಿಂದದೇವ್ ಗಿರಿಜೀ ಮಹಾರಾಜ್​, ಅಯೋಧ್ಯೆಯ ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ, ಅಯೋಧ್ಯೆಯ ಹೋಮಿಯೋಪತಿ ಡಾಕ್ಟರ್​ ಅನಿಲ್ ಮಿಶ್ರಾ, ಪಾಟ್ನದ ಕಾಮೇಶ್ವರ ಚೌಪಾಲ್​(ಎಸ್​ಸಿ) , ಮಹಾಂತ ದಿನೇಂದ್ರ ದಾಸ್​, ಅಯೋಧ್ಯೆಯ ನಿರ್ಮೋಹಿ ಅಖಾಡದ ಪ್ರತಿನಿಧಿಗಳು ಸದಸ್ಯರಾಗಿದ್ದಾರೆ.

ಸುಪ್ರೀಂ ನ್ಯಾಯಪೀಠ ಸೂಚನೆಯಂತೆ ಟ್ರಸ್ಟ್ ರಚನೆ

ಸುಪ್ರೀಂ ನ್ಯಾಯಪೀಠ ಸೂಚನೆಯಂತೆ ಟ್ರಸ್ಟ್ ರಚನೆ

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಶರದ್ ಬೊಬ್ಡೆ, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು ನೀಡಿದ ಒಮ್ಮತದ ತೀರ್ಪಿನಂತೆ, ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ ಸಿಗಲಿದೆ.

ನವೆಂಬರ್ 09 ರಂದು ಅಯೋಧ್ಯೆ ವಿವಾದದ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್, 2.77 ಎಕರೆ ವಿವಾದಿತ ಭೂಮಿ ರಾಮಲಲ್ಲಾಗೆ ಸೇರಿದೆ ಎಂದಿತ್ತು. ಜೊತೆಗೆ ಮುಸ್ಲಿಮರಿಗೆ ಬೇರೆ ಎಲ್ಲಾದರೂ 5 ಎಕರೆ ಪರ್ಯಾಯ ಜಮೀನನ್ನು ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ರಾಮಮಂದಿರ ನಿರ್ಮಾಣ ಸಂಬಂಧ ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಟ್ರಸ್ಟ್ ರಚಿಸಿದ್ದು, ಅದರಲ್ಲಿಕರ್ನಾಟಕದ ಉಡುಪಿ ಪೇಜಾವರ ಮಠದ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನೂ ವಿಶ್ವಸ್ಥರನ್ನಾಗಿ ನೇಮಿಸಲಾಗಿದೆ.

English summary
In a major development, the Mahavir temple from Bihar State's capital city of Patna has announced a donation Rs 10 crore for the construction of Ram temple in Ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X