• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಗಲಭೆ: ಓರ್ವ ಸಾವು

|

ಪಾಟ್ನಾ, ಅಕ್ಟೋಬರ್ 27: ಬಿಹಾರದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಓರ್ವ ಮೃತಪಟ್ಟಿದ್ದಾರೆ.

ದುರ್ಗಾ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದು, 20ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ದುರ್ಗಾ ಪೂಜಾ ಪೆಂಡಾಲ್: ಆಯೋಜಕರನ್ನು ಬಿಟ್ಟು ಯಾರಿಗೂ ಅವಕಾಶವಿಲ್ಲ ಎಂದ ಹೈಕೋರ್ಟ್

ಬಳಿಕ ಗುಂಪಿನಲ್ಲಿ ಯಾರೋ ಗುಂಡಿನ ದಾಳಿ ನಡೆಸಿದ್ದು, ಓರ್ವ ಬಲಿಯಾಗಿದ್ದಾರೆ. ಬಿಹಾರದ ಮುಂಗೆರ್‌ನಲ್ಲಿ ಘಟನೆ ನಡೆದಿದೆ. ಈ ಕುರಿತು ಎಸ್‌ಪಿ ಲಿಪಿ ಸಿಂಗ್ ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ಮುಂಗೆರ್‌ನಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಪೊಲೀಸ್ ಗುಂಡೇಟಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಾಕಷ್ಟು ಮಂದಿ ಪೊಲೀಸರೇ ಹಲ್ಲೆ ನಡೆಸುತ್ತಿರುವ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋದ ಸತ್ಯಾಸತ್ಯತೆ ಕುರಿತು ಅಧಿಕೃತ ಮಾಹಿತಿ ಹೊರಬರಬೇಕಿದೆ. ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಪೈಕಿ 71 ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ. ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಚುನಾವಣೆ ಸಂದರ್ಭದಲ್ಲೇ ಇಂತಹ ಗಲಭೆಗಳು ನಡೆಯುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ ಬಿಹಾರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

English summary
An 18-year-old man was shot dead and some people were injured in firing after clashes during the immersion of Goddess Durga on Monday in Bihar's Munger.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X