• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಕೆ ಗರ್ಭಿಣಿಯಾಗಿದ್ದಾಳೆಂದು ತಿಳಿದಾಗ ಸೀಮೆಎಣ್ಣೆ ಸುರಿದು ಬೆಂಕಿ ಇಟ್ಟ

|

ಬಿಹಾರ, ಡಿಸೆಂಬರ್ 11: ಅತ್ಯಾಚಾರ ಮಾಡಿ ಬಳಿಕ ಮದುವೆಯಾಗುತ್ತೇನೆ ಎಂದು ಮಾತುಕೊಟ್ಟು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ಬಿಹಾರದ ಚಂಪಾರಣದಲ್ಲಿ ನಡೆದಿದೆ.

ಉನ್ನಾವೋದಲ್ಲಿ ಅತ್ಯಾಚಾರ ಸಂತ್ರಸ್ತೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕೆಯನ್ನು ಕೊಲೆ ಮಾಡಿದ ನಾಲ್ಕೈದು ದಿನದಲ್ಲಿ ಇಂಥದ್ದೊಂದು ಘಟನೆ ನಡೆದಿದೆ.

ಸಾಯುವ ಮುನ್ನಾ ಅತ್ಯಾಚಾರ ಸಂತ್ರಸ್ತೆ ಹೇಳಿದ ಕೊನೆಯ ಮಾತು

25 ವರ್ಷದ ವ್ಯಕ್ತಿ ಅರ್ಮಾನ್ 19 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ, ಬಳಿಕ ಆಕೆಯನ್ನೇ ಮದುವೆಯಾಗುವುದಾಗಿ ಮಾತುಕೊಟ್ಟಿದ್ದ. ಆಕೆ ಗರ್ಭಿಣಿ ಎಂದು ತಿಳಿದಾಗ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಆಸ್ಪತ್ರೆಗೆ ಕೊಂಡೊಯ್ದಾಗ ಆಕೆ ಗರ್ಭಿಣಿ ಎಂದು ಎಲ್ಲರಿಗೂ ತಿಳಿದುಬಂದಿದೆ.

ಯುವತಿ ಕೆಲ ತಿಂಗಳ ಹಿಂದಷ್ಟೇ ತನ್ನ ತಂದೆಯನ್ನು ಕಳೆದುಕೊಂಡಿದ್ದಳು. ಒಂದು ದಿನ ಭತ್ತದ ಗದ್ದೆಯಲ್ಲಿ ಆಕೆಯೊಬ್ಬಳೇ ಕೆಲಸ ಮಾಡುತ್ತಿದ್ದಾಗ ಆಕೆಯನ್ನು ಎಳೆದೊಯ್ದು ಆರೋಪಿ ಅತ್ಯಾಚಾರವೆಸಗಿದ್ದ.

ಅಷ್ಟಕ್ಕೇ ಆತನ ದೌರ್ಜನ್ಯ ನಿಂತಿರಲಿಲ್ಲ ಪದೇ ಪದೇ ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದ. ಆಕೆ ಗರ್ಭಿಣಿ ಎಂದು ತಿಳಿದ ಬಳಿಕ ಸೆಟಲ್‌ಮೆಂಟ್ ಮಾಡಲು ಆರೋಪಿ ಅರ್ಮಾನ್ ಯುವತಿ ಮನೆಗೆ ತನ್ನ ಸಹೋದರರನ್ನು ಕಳುಹಿಸಿದ್ದ ಆದರೆ ಇದಕ್ಕೆ ಸಂತ್ರಸ್ತೆ ಪೋಷಕರು ಒಪ್ಪಿರಲಿಲ್ಲ. ಈ ಕಾರಣಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
A 25-year-old man barged into the home of his 19-year-old girlfriend, poured kerosene and torched her at a village near Narkatiyaganj in Champaran.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X