• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರ ಚುನಾವಣಾ ಪ್ರಚಾರಕ್ಕಾಗಿ ಅನ್ ಲಾಕ್ 5.0 ಹೊಸ ನಿಯಮ

|

ಪಾಟ್ನಾ, ಅಕ್ಟೋಬರ್,08: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಬಿಹಾರ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ರಾಜಕೀಯ ಸಭೆ ಸಮಾರಂಭಗಳಿಗೆ ಕೇಂದ್ರ ಗೃಹ ಸಚಿವಾಲಯವು ಅನುಮತಿ ನೀಡಿದೆ.

ಕಂಟೇನ್ಮೆಂಟ್ ವಲಯಗಳಿಂದ ಹೊರ ಪ್ರದೇಶಗಳಲ್ಲಿ ರಾಜಕೀಯ ಸಾರ್ವಜನಿಕ ಸಭೆಗಳನ್ನು ನಡೆಸುವುದಕ್ಕೆ ಅನುಮತಿ ನೀಡಿ ಗೃಹ ಸಚಿವಾಲಯವು ಗುರುವಾರ ಅಧಿಸೂಚನೆ ಹೊರಡಿಸಿದೆ. ಚುನಾವಣೆ ನಡೆಯುತ್ತಿರುವ ವಿಧಾನಸಭೆ, ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ಟೋಬರ್.15ರೊಳಗೆ ರಾಜಕೀಯ ಸಭೆ ನಡೆಸಲು ಷರತ್ತುಬದ್ಧ ಅವಕಾಶ ನೀಡಿದೆ.

ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ತಪ್ಪಿನಿಂದ ಅರಳುತ್ತಾ ಕಮಲ?

ರಾಜಕೀಯ ಉದ್ದೇಶಕ್ಕಾಗಿ ನಡೆಸುವ ಸಾರ್ವಜನಿಕ ಸಭೆಗಳಲ್ಲಿ ಆ ಸಭಾಂಗಣದ ಶೇ.50ರಷ್ಟು ಸದಸ್ಯರು ಮಾತ್ರ ಭಾಗವವಹಿಸುವುದಕ್ಕೆ ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ. 200 ಜನರು ಭಾಗವಹಿಸುವ ಸಭಾಂಗಣದಲ್ಲಿ ಗರಿಷ್ಠ 100 ಜನರು ಭಾಗವಹಿಸಲು ಅನುಮತಿ ನೀಡಲಾಗಿದೆ.

ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ:

ರಾಜಕಾರಣದ ಸಾರ್ವಜನಿಕ ಸಭೆ ಮತ್ತು ಸಮಾರಂಭಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರ ಜೊತೆಗೆ ಹ್ಯಾಂಡ್ ಸ್ಯಾನಿಟೈಸ್ ಮಾಡಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸಭೆಗಳು ನಡೆಯುವ ಪ್ರದೇಶಕ್ಕೆ ಅನುಗುಣವಾಗಿ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ. ವಿಶಾಲವಾದ ಪ್ರದೇಶದಲ್ಲಿ ಸಮಾರಂಭವನ್ನು ನಡೆಸುತ್ತಿದ್ದಲ್ಲಿ 100ಕ್ಕಿಂತ ಹೆಚ್ಚು ಜನರು ಭಾಗವಹಿಸುವುದಕ್ಕೆ ಅವಕಾಶವಿದೆ. ಆದರೆ ಕಡ್ಡಾಯವಾಗಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದರ ಬಗ್ಗೆ ಲಕ್ಷ್ಯ ವಹಿಸುವಂತೆ ಸೂಚನೆ ನೀಡಲಾಗಿದೆ.

ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ:

ಬಿಹಾರ ವಿಧಾನಸಭೆಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತ, ನವೆಂಬರ್.03 ಎರಡನೇ ಹಂತ ಮತ್ತು ನವೆಂಬರ್.07ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇದರ ಜೊತೆಗೆ ಖಾಲಿ ಆಗಿರುವ ಬಿಹಾರದ ವಾಲ್ಮೀಕಿ ನಗರ ಲೋಕಸಕ್ಷಾ ಕ್ಷೇತ್ರಕ್ಕೆ ನವೆಂಬರ್.07ರಂದೇ ಮತದಾನ ನಡೆಯಲಿದೆ. ಈ ಹಿನ್ನೆಲೆ ಸಾರ್ವಜನಿಕವಾಗಿ ರಾಜಕೀಯ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

English summary
MHA Allows Gatherings Of Over 100 Persons In Election-Bound Areas Under Unlock 5.0.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X