ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ ಸಂಚರಿಸುವ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

|
Google Oneindia Kannada News

ನವದೆಹಲಿ, ಮೇ.19: ನೊವೆಲ್ ಕೊರೊನಾ ವೈರಸ್ ಭೀತಿ ಹಾಗೂ ಭಾರತ ಲಾಕ್ ನಡುವೆ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ವ್ಯವಸ್ಥೆ ಕಲ್ಪಿಸಿರುವ ಶ್ರಮಿಕ್ ರೈಲಿನಲ್ಲಿ ತುಂಬು ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ.

ಮಂಗಳವಾರ ಗುಜರಾತ್ ನ ಸೂರತ್ ನಿಂದ ಬಿಹಾರದ ಸೀತಾಮರ್ಹಿಗೆ ತೆರಳುತ್ತಿದ್ದ ಶ್ರಮಿಕ್ ರೈಲಿನಲ್ಲಿ ಮಹಿಳೆಯು ಮಗುವಿಗೆ ಜನ್ಮ ನೀಡಿದ್ದಾರೆ. ಬಿಹಾರದ ದನಪುರ್ ರೈಲ್ವೆ ನಿಲ್ದಾಣದಲ್ಲಿ ಶ್ರಮಿಕ್ ರೈಲನ್ನು ನಿಲ್ಲಿಸಿದ್ದು, ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡಿದ್ದಾರೆ.

ಶ್ರಮಿಕ್ ರೈಲು ಸಂಚಾರ; ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿಶ್ರಮಿಕ್ ರೈಲು ಸಂಚಾರ; ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿ

ಇನ್ನು, ಹೆರಿಗೆ ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Migrant woman gave birth to a baby in a train in Bihar

ಲಾಕ್ ಡೌನ್ ನಿಯಮದ ನಡುವೆ ಸಂಚಾರ:

ಕೊರೊನಾ ವೈರಸ್ ಹರಡುವಿಕೆ ಭೀತಿ ಹಿನ್ನೆಲೆ ಭಾರತ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು 10 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು, 60 ವರ್ಷದ ಮೇಲ್ಪಟ್ಟವರು ಸಾರ್ವಜನಿಕವಾಗಿ ಸಂಚರಿಸುವಂತಿಲ್ಲ. ಮನೆಗಳಿಂದ ಹೊರಗೆ ಬರುವಂತಿಲ್ಲ ಎಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲೇ ಹೇಳಲಾಗಿದೆ. ಹೀಗಿದ್ದರೂ ಕೂಡಾ ತುಂಬು ಗರ್ಭಿಣಿಯು ಶ್ರಮಿಕ್ ರೈಲಿನಲ್ಲಿ ಗುಜರಾತ್ ನಿಂದ ಬಿಹಾರಕ್ಕೆ ಹೊರಟಿದ್ದರು ಎಂದು ತಿಳಿದು ಬಂದಿದೆ.

English summary
A Migrant woman gave birth to a baby in a train in Bihar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X