• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರ ಚುನಾವಣೆ ಗೆಲುವಿನ ಗುಟ್ಟು ಬಿಚ್ಚಿಟ್ಟ ಪ್ರಧಾನಿ ಮೋದಿ!

|

ಪಾಟ್ನಾ, ನವೆಂಬರ್.11: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಯಶಸ್ವಿಯಾಗಿ ಬಿಹಾರ ಮತ್ತು ಉಪ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ ಭಾರತೀಯ ಚುನಾವಣಾ ಆಯೋಗಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಧನ್ಯವಾದ ಆರ್ಪಿಸಿದ್ದಾರೆ. ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಗೆಲುವಿನ ಗುಟ್ಟು ಏನು ಎಂಬುದನ್ನು ಪ್ರಧಾನಿ ಮೋದಿ ಬಿಚ್ಚಿಟ್ಟಿದ್ದಾರೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿ ಪ್ರಧಾನಿ ಮೋದಿ ಮಾತನಾಡಿದರು. ಬಿಹಾರದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶಾಂತಿಯುತ ಮತ್ತು ಸುರಕ್ಷಿತ ರೀತಿಯಲ್ಲಿ ಮತದಾನ ನಡೆದಿರುವುದು ಭಾರತೀಯರೆಲ್ಲ ಹೆಮ್ಮ ಪಡುವ ವಿಷಯವಾಗಿದೆ. ಕೊವಿಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸುವುದೇ ದೊಡ್ಡ ಸವಾಲು ಆಗಿತ್ತು.

ಬಿಹಾರದಲ್ಲಿ 7ನೇ ಬಾರಿ ಸಿಎಂ ಆಗಿರುವ ನಿತೀಶ್ ಕುಮಾರ್ ರಾಜಕೀಯ ಇತಿಹಾಸ

ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬವಾಗಿರುವ ಚುನಾವಣೆಯನ್ನು ಯಶಸ್ವಿ ಮತ್ತು ಸುರಕ್ಷಿತವಾಗಿ ಆಚರಿಸಲಾಗಿದೆ. ಈ ಬಾರಿ ನಡೆದ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಮರು-ಮತದಾನ ನಡೆದಿಲ್ಲ ಎನ್ನುವುದು ಮತ್ತೊಂದು ವಿಶೇಷವಾಗಿತ್ತು. ಭಾರತೀಯ ಚುನಾವಣಾ ಆಯೋಗ, ಸ್ಥಳೀಯ ಆಡಳಿತ ಮತ್ತು ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಬಿಜೆಪಿ ಕಾರ್ಯಕರ್ತರಿಗೆ ವಂದಿಸಿದ ಪ್ರಧಾನಿ ಮೋದಿ

ಬಿಜೆಪಿ ಕಾರ್ಯಕರ್ತರಿಗೆ ವಂದಿಸಿದ ಪ್ರಧಾನಿ ಮೋದಿ

ಕೊರೊನಾವೈರಸ್ ಸೋಂಕಿನ ಭೀತಿ ನಡುವೆಯೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪರವಾಗಿ ಚುನಾವಣೆಯಲ್ಲಿ ಶ್ರಮಿಸಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದರು. ಬಿಜೆಪಿ ದಿಗ್ವಿಜಯಕ್ಕೆ ಹೆಗಲು ಕೊಟ್ಟ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಾರಾಯಣ್ ಅವರಿಗೆ ವಿಶೇಷವಾಗಿ ಗೌರವಿಸಬೇಕಿದೆ ಎಂದು ಹೇಳಿದರು. ಈ ವೇಳೆ ನೆರದಿದ್ದ ಕಾರ್ಯಕರ್ತರ ಚೆಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದರು.

ಅಭಿವೃದ್ಧಿಪರ ಪಕ್ಷ ಹಾಗೂ ಸರ್ಕಾರಕ್ಕೆ ಜನರ ಮತ ಸ್ಪಷ್ಟ

ಅಭಿವೃದ್ಧಿಪರ ಪಕ್ಷ ಹಾಗೂ ಸರ್ಕಾರಕ್ಕೆ ಜನರ ಮತ ಸ್ಪಷ್ಟ

ದೇಶದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಸರ್ಕಾರ ಅಥವಾ ಪಕ್ಷಗಳ ಪಕ್ಷಕ್ಕೆ ಭಾರತೀಯರು ಯಾವಾಗಲೂ ಬೆಂಬಲ ಸೂಚಿಸುತ್ತಾರೆ ಎನ್ನುವುದು ಪದೇ ಪದೆ ಸ್ಪಷ್ಟವಾಗುತ್ತಿದೆ. ಇದೆಲ್ಲ ಹೇಗೆ ಸಾಧ್ಯವಾಗುತ್ತದೆ ಎಂದು ಹಲವು ಬಾರಿ ಪ್ರಶ್ನೆ ಮಾಡುತ್ತಿದ್ದರು. ಅಂಥ ಪ್ರಶ್ನೆ ಕೇಳುವವರಿಗೆ ಮತದಾರರು ನಿನ್ನೆಯ ಫಲಿತಾಂಶದ ಮೂಲಕ ಉತ್ತರ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಗೆಲುವಿನ ಗುಟ್ಟು

ಬಿಹಾರ ವಿಧಾನಸಭಾ ಚುನಾವಣೆ ಗೆಲುವಿನ ಗುಟ್ಟು

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಗೆಲುವು ಸಾಧಿಸುವುದಕ್ಕೆ ಕಾರಣವೇ ಅಭಿವೃದ್ಧಿ ಮಂತ್ರವಾಗಿದೆ. ಸಬ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮಂತ್ರದ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಸರ್ಕಾರಕ್ಕೆ ಮತದಾರರು ಅಧಿಕಾರವನ್ನು ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬಿಹಾರ ಮತದಾರರು ನೀಡಿದ ಅಂತಿಮ ತೀರ್ಪಿನ ವಿವರ

ಬಿಹಾರ ಮತದಾರರು ನೀಡಿದ ಅಂತಿಮ ತೀರ್ಪಿನ ವಿವರ

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಈ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.

ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಅದರಲ್ಲಿ ರಾಷ್ಟ್ರೀಯ ಜನತಾ ದಳ 75, ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.

English summary
Bihar Assembly Election Result: Modi Salute To Who Participated In The Festival Of Democracy, Amid Covid-19 Pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X