ಬಿಹಾರ ವಿಧಾನಸಭೆ ಚುನಾವಣೆ; ಮೋದಿಯಿಂದ 12 ಸಮಾವೇಶ

ಪಾಟ್ನಾ, ಅಕ್ಟೋಬರ್ 16 : ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದಾರೆ. ಮೂರು ಹಂತದಲ್ಲಿ ಬಿಹಾರ ಚುನಾವಣೆ ನಡೆಯಲಿದೆ.

ಬಿಹಾರ ವಿಧಾನಸಭೆ ಚುನಾವಣೆಯ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಈ ಕುರಿತು ಮಾಹಿತಿ ನೀಡಿದ್ದಾರೆ. ಒಟ್ಟು 12 ಸಮಾವೇಶಗಳನ್ನು ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

Narendra Modi To Hold 12 Rallies In Bihar

ಅಕ್ಟೋಬರ್ 23ರಂದು ನರೇಂದ್ರ ಮೋದಿ ಬಿಹಾರದಲ್ಲಿ ಮೂರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಅಕ್ಟೋಬರ್ 28ರಂದು 71 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದೆ.

ನರೇಂದ್ರ ಮೋದಿ ಅಕ್ಟೋಬರ್ 23ರಂದು ಸಸಾರಂ, ಗಯಾ ಮತ್ತು ಬಾಗಲ್‌ಪುರ್‌ನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಅಕ್ಟೋಬರ್ 28ರಂದು ದರ್ಬಾಂಗ್, ಪಾಟ್ನಾ ಮತ್ತು ಮುಜಾಫುರ್‌ ಪುರದಲ್ಲಿ ಸಮಾವೇಶಗಳು ನಡೆಯಲಿವೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಅಕ್ಟೋಬರ್ 28 (71 ಸೀಟು), ನವೆಂಬರ್ 3 (94 ಸೀಟು), ನವೆಂಬರ್ 7 (78) ಸೀಟುಗಳಿಗೆ ಮತದಾನ ನಡೆಯಲಿದೆ. ಜೆಡಿಯು ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಚುನಾವಣೆ ಎದುರಿಸುತ್ತಿದೆ.

ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾಗಿರುವ ಜೆಡಿಯು 122 ಸೀಟುಗಳಲ್ಲಿ ಸ್ಪರ್ಧೆ ಮಾಡಲಿದೆ. ಬಿಜೆಪಿ 121 ಸೀಟುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಕೋವಿಡ್ ಸಂದರ್ಭದಲ್ಲಿಯೇ ಚುನಾವಣೆ ಎದುರಾಗಿದ್ದು, ಪ್ರಚಾರದ ತಂತ್ರಗಳು ಬದಲಾಗಿವೆ.

ಬಿಹಾರ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ ಏಕಾಂಗಿಯಾಗಿ ಕಣಕ್ಕಿಳಿದಿದೆ. ಆದರೆ, ಪಕ್ಷ ಬಿಜೆಪಿ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಆಯ್ಕೆಯನ್ನು ಸಹ ತೆರೆದಿಟ್ಟಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಆರ್‌ಜೆಡಿ ಮಹಾಘಟಬಂಧನ್ ಮಾಡಿಕೊಂಡು ಚುನಾವಣಾ ಕಣಕ್ಕೆ ಧುಮಿಕಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು ಇದರಲ್ಲಿ ಸೇರಿಕೊಂಡಿದ್ದು, ಸೀಟು ಹಂಚಿಕೆ ಮಾಡಿಕೊಂಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+