ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Just in: 2024ರ ಚುನಾವಣೆಗೆ ಮೋದಿ ಪ್ರಧಾನಿ ಅಭ್ಯರ್ಥಿ

|
Google Oneindia Kannada News

ಪಾಟ್ನಾ, ಆ.01: 2024ರ ಲೋಕಸಭೆ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಎದುರಿಸಲಿದ್ದು, ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಗಳ ವಿಚಾರ ಸದಾ ಚರ್ಚೆಯ ವಿಷಯವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ನಿವೃತ್ತಿ ಮತ್ತು ಹೊಸ ವ್ಯಕ್ತಿಯ ಪಟ್ಟಾಭಿಷೇಕದ ಬಗ್ಗೆ ಊಹಾಪೋಹಗಳಿವೆ. ಇವುಗಳ ನಡುವೆಯೇ 2024ರಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಚುನಾವಣೆ ಎದುರಿಸಲಿದ್ದು, ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪಾಟ್ನಾದಲ್ಲಿ ನಡೆದ ಬಿಜೆಪಿಯ ಯುನೈಟೆಡ್ ಫ್ರಂಟ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಅವರು 2024 ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಎಂದು ಘೋಷಿಸಿದ್ದಾರೆ. ಇದರೊಂದಿಗೆ ಬಿಹಾರದಲ್ಲಿ ಜೆಡಿಯು ಜೊತೆಗಿನ ಪಕ್ಷದ ಮೈತ್ರಿಯನ್ನು ಮುಂದುವರೆಸುವ ಕುರಿತು ಘೋಷಿಸಿದ್ದಾರೆ.

Narendra Modi will be BJPs PM candidate in 2024 Lok Sabha elections

ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, "2024ರ ಲೋಕಸಭೆ ಮತ್ತು 2025ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಸ್ಪರ್ಧಿಸಲಿವೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ" ಎಂದರು.

"2024ರ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವುದು, ಅವರೇ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. 2024ರಲ್ಲಿ ಹಾಗೂ 2025ರಲ್ಲಿ ಬಿಹಾರದಲ್ಲಿ ಒಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ" ಎಂದು ಅವರು ಹೇಳಿದರು.

Recommended Video

ಫಾಝಿಲ್ ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಚೇಸ್ ಮಾಡಿ ಅರೆಸ್ಟ್ ಮಾಡಿದ್ದು ಹೇಗೆ? | *Crime |Oneindia Kannada

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಮೈತ್ರಿ ಪಕ್ಷ ಬಿಜೆಪಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳು ತುಂಬ ದಿನದಿಂದ ಹರಿದಾಡುತ್ತಿವೆ. ಮುಂದಿನ ಬಾರಿ ಈ ಮೈತ್ರಿ ಒಡೆದು ಬೀಳಬಹುದು ಎಂಬ ಊಹಾಪೋಹಗಳು ಇದ್ದವು. ಆದರೆ, ಅಮಿತ್ ಶಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ವದಂತಿಗಳಿಗೆ ತಡೆ ಹಾಕಿದ್ದು, ಮುಂದಿನ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯುವ ಬಗ್ಗೆ ದೃಢಪಡಿಸಿದ್ದಾರೆ.

English summary
Lok Sabha elections 2024: Narendra Modi will be BJP’s prime ministerial candidate says Amit Shah in Patna. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X