ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರ್ಖಂಡ್‌ನಲ್ಲಿ ನಕ್ಸಲ್ ದಾಳಿ:ನಾಲ್ವರು ಪೊಲೀಸರು ಹುತಾತ್ಮ

|
Google Oneindia Kannada News

ಲತೇಹಾರ್, ನವೆಂಬರ್ 23: ಜಾರ್ಖಡ್‌ನಲ್ಲಿ ನಡೆದ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಪೊಲೀಸರ ಸಂಖ್ಯೆ 4ಕ್ಕೇರಿದೆ.

ಶುಕ್ರವಾರ ನಡೆದ ಘರ್ಷಣೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸರು ಹುತಾತ್ಮರಾಗಿದ್ದಾರೆ. ಇನ್ನೊಬ್ಬ ಪೊಲೀಸರು ಕೂಡ ಮೃತಪಟ್ಟಿದ್ದಾರೆ.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 30 ರಿಂದ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 23 ರಂದು ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಚಾಮರಾಜನಗರ ಗಡಿಯಲ್ಲಿ ನಕ್ಸಲ್ ಮೇಲೆ ಹದ್ದಿನ ಕಣ್ಣುಚಾಮರಾಜನಗರ ಗಡಿಯಲ್ಲಿ ನಕ್ಸಲ್ ಮೇಲೆ ಹದ್ದಿನ ಕಣ್ಣು

ನಕ್ಸಲ್ ಪೀಡಿತ ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಬಾಕಿ ಇರುವಾಗಲೇ ನಕ್ಸಲೀಯರು ಪೊಲೀಸ್ ಗಸ್ತು ಸಿಬ್ಬಂದಿಯ ಮೇಲೆ ದಾಳಿ ಮಾಡುವ ಮೂಲಕ ತಮ್ಮ ಅಸ್ವಿತ್ವವನ್ನು ಮತ್ತೊಮ್ಮೆ ಮೆರೆದಿದ್ದಾರೆ.

Naxal Attack 4 Cops Killed In Jharkhand

ಪೊಲೀಸರು ಇದಕ್ಕೆ ಪ್ರತೀಕಾರವಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ ಎಎಸ್ ಐನ್ನು ಸುಕ್ರ ಒರಾನ್ ಸೇರಿದಂತೆ ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಎಂದಿನಂತೆ ಹೆದ್ದಾರಿ ಗಸ್ತು ಭಾಗವಾಗಿ ರಾಂಚಿ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಚಾಂಡ್ವಾ ಪೊಲೀಸ್ ಠಾಣೆಯ ವ್ಯಾಪ್ತಿಯ ಲುಕೈಯಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ 8-30 ರ ಸುಮಾರಿನಲ್ಲಿ ಇದ್ದಕ್ಕಿದ್ದಂತೆ ಕೆಲವರು ವಾಹನದ ಮೇಲೆ ಗುಂಡು ಹಾರಿಸಿದ್ದಾರೆ.

English summary
police party of Jharkhand Police was ambushed by Naxals in the state's Letehar district on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X