ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ ಎನ್‌ಸಿಪಿ ಪರ 40 ಸ್ಟಾರ್ ಪ್ರಚಾರಕರು ಕಣಕ್ಕೆ

|
Google Oneindia Kannada News

ಪಾಟ್ನಾ, ಅ. 9: ಹಲವು ಪಕ್ಷಗಳ ರಣತಂತ್ರಗಳ ಯುದ್ಧಭೂಮಿ ಎನಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಅಖಾಡಕ್ಕೆ ಶರದ್ ಪವಾರ್ ಅವರ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಕೂಡಾ ಎಂಟ್ರಿ ಕೊಟ್ಟಿದೆ. ಎನ್‌ಸಿಪಿ ಪರ 40 ಸ್ಟಾರ್ ಪ್ರಚಾರಕರು ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗಿದೆ.

ನಿರೀಕ್ಷೆಯಂತೆ ಪಕ್ಷದ ವರಿಷ್ಠ ಶರದ್ ಪವಾರ್ ಅವರು ಮುಖ್ಯ ಸ್ಟಾರ್ ಪ್ರಚಾರಕರಾಗಲಿದ್ದು, ಸಂಪೂರ್ಣ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ. ಸದ್ಯದ ಮಾಹಿತಿಯಂತೆ ಮಹಾರಾಷ್ಟ್ರದ ಅಲ್ಪಸಂಖ್ಯಾತ ಖಾತೆ ಸಚಿವ ನವಾಜ್ ಮಲೀಕ್, ಎನ್‌ಸಿಪಿ ಸಂಸದರಾದ ಪ್ರಫುಲ್ ಪಟೇಲ್, ಸುನಿಲ್ ತತ್ಕರೆ, ಸುಪ್ರಿಯಾ ಸುಳೆ, ಫೌಜಿಯಾ ಖಾನ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

 ಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿ ಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿ

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

ಎನ್‌ಡಿಎ, ಮಹಾಮೈತ್ರಿಕೂಟಕ್ಕೆ ಮೊದಲ ಹಂತದ ಪರೀಕ್ಷೆಎನ್‌ಡಿಎ, ಮಹಾಮೈತ್ರಿಕೂಟಕ್ಕೆ ಮೊದಲ ಹಂತದ ಪರೀಕ್ಷೆ

NCP to contest Bihar assembly elections, releases list of 40 ‘star’ campaigners

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
The NCP on Thursday said it will contest the Bihar Assembly polls, and released a list of its 40 star campaigners for the elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X