ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ ಸಿಎಂ ಆಯ್ಕೆಗೆ ಭಾನುವಾರ ಎನ್‌ಡಿಎ ಸಭೆ: ನಿತೀಶ್ ಕುಮಾರ್

|
Google Oneindia Kannada News

ಪಟ್ನಾ, ನವೆಂಬರ್ 13: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಡಿಎ) ಸಹಭಾಗಿ ಪಕ್ಷಗಳು ಭಾನುವಾರ ಮಧ್ಯಾಹ್ನ 12.30ರ ವೇಳೆಗೆ ಸಭೆ ಸೇರಲಿದ್ದು, ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ನಿರ್ಧರಿಸಲಿವೆ ಎಂದು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ತಿಳಿಸಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ನವೆಂಬರ್ 15ರಂದು ಸಮಯದ ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಬಿಹಾರದಲ್ಲಿ ಮೈತ್ರಿಮಾಡಿಕೊಂಡಿದ್ದ ಎನ್‌ಡಿಎದ ನಾಲ್ಕು ಪಾಲುದಾರ ಪಕ್ಷಗಳಾದ ಜೆಡಿಯು, ಬಿಜೆಪಿ, ಎಚ್‌ಎಎಂ ಮತ್ತು ವಿಕಾಸಶೀಲ ಇನ್ಸಾನ್ ಪಾರ್ಟಿ (ವಿಐಪಿ) ಮುಖಂಡರು ಶುಕ್ರವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದು, ಭಾನುವಾರದ ಸಭೆಯ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ.

ಚಿರಾಗ್ ವಿರುದ್ಧ ಕ್ರಮದ ಬಗ್ಗೆ ಬಿಜೆಪಿ ನಿರ್ಧರಿಸಲಿ: ನಿತೀಶ್ ಕುಮಾರ್ಚಿರಾಗ್ ವಿರುದ್ಧ ಕ್ರಮದ ಬಗ್ಗೆ ಬಿಜೆಪಿ ನಿರ್ಧರಿಸಲಿ: ನಿತೀಶ್ ಕುಮಾರ್

74 ಸೀಟುಗಳೊಂದಿಗೆ ಆಡಳಿತಾರೂಢ ಮೈತ್ರಿಕೂಟದಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಅದಕ್ಕಿಂತಲೂ ಕಡಿಮೆ (43) ಕ್ಷೇತ್ರಗಳಲ್ಲಿ ಗೆಲುವು ಕಂಡಿರುವ ಜೆಡಿಯು ಪಕ್ಷಕ್ಕೇ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಚುನಾವಣೆಗೂ ಮುನ್ನ ಘೋಷಿಸಿದ್ದ ಬಿಜೆಪಿ, ಅದಕ್ಕೆ ಬದ್ಧವಾಗಿರಲು ಮುಂದಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಕೂಡ ನಿತೀಶ್ ಅವರಿಗೆ ಸಿಎಂ ಗಾದಿ ನೀಡಲು ಒಲವು ಪ್ರದರ್ಶಿಸಿದ್ದಾರೆ.

NDA Will Meet On Sunday To Decide Bihars Next Chief Minister: Nitish Kumar

ಬಿಹಾರ ಹೊಸ ಸರ್ಕಾರ: ಕ್ಯಾಬಿನೆಟ್‌ನಲ್ಲಿ ಬಿಜೆಪಿಗೆ ಅಧಿಕ ಸ್ಥಾನ ಸಿಗುವ ಸಾಧ್ಯತೆಬಿಹಾರ ಹೊಸ ಸರ್ಕಾರ: ಕ್ಯಾಬಿನೆಟ್‌ನಲ್ಲಿ ಬಿಜೆಪಿಗೆ ಅಧಿಕ ಸ್ಥಾನ ಸಿಗುವ ಸಾಧ್ಯತೆ

ನವೆಂಬರ್ ಅಂತ್ಯದ ವೇಳೆಗೆ ನಿತೀಶ್ ಕುಮಾರ್ ಅವರ ಸರ್ಕಾರದ ಅವಧಿ ಅಂತ್ಯವಾಗಲಿದೆ. ಅದಕ್ಕೂ ಮೊದಲೇ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ. ಸೋಮವಾರವೇ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಬಿಹಾರದ ಅತ್ಯಂತ ಸುದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಸರು ಪಡೆಯಲು ಅವರಿಗೆ ಅವಕಾಶ ಸಿಗಲಿದೆ. ರಾಜ್ಯದ ಮೊದಲ ಮುಖ್ಯಮಂತ್ರಿ ಶ್ರೀಕಾಂತ್ ಸಿನ್ಹಾ ಅವರು 17 ವರ್ಷ 52 ದಿನ ಮುಖ್ಯಮಂತ್ರಿಯಾಗಿದ್ದರು. ನಿತೀಶ್ ಕುಮಾರ್ ಇದುವರೆಗೂ 14 ವರ್ಷ ಮತ್ತು 82 ದಿನ ಸಿಎಂ ಆಗಿದ್ದಾರೆ.

English summary
JDU leader Nitish Kumar said, NDA partners will meet on Sunday at 12.30 to elect Bihar's next Chief Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X