Breaking: ಬಿಹಾರ ಸಿಎಂ ಆಗಿ ಬುಧವಾರವೇ ನಿತೀಶ್ ಪ್ರಮಾಣವಚನ

ಪಾಟ್ನಾ, ಆಗಸ್ಟ್ 9: ಬಿಹಾರದ ಮುಖ್ಯಮಂತ್ರಿ ಆಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಆಗಿ ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪಾಟ್ನಾದ ರಾಜಭವನದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ನೂತನ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 10ರ ಬುಧವಾರ ಸಿಎಂ ಮತ್ತು ಡಿಸಿಎಂ ಪದಗ್ರಹಣ ಕಾರ್ಯಕ್ರಮವಷ್ಟೇ ಜರುಗಲಿದ್ದು, ಇನ್ನು ಕೆಲವು ದಿನಗಳ ನಂತರದಲ್ಲಿ ಸಂಪುಟ ರಚನೆ ಮತ್ತು ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದು ಬಂದಿದೆ.

Nitish kumar and Tejashwi to be take oath in as CM and Dy CM respectively on Wednesday

8ನೇ ಬಾರಿ ಸಿಎಂ ಆಗಿ ನಿತೀಶ್ ಕುಮಾರ್ ಪದಗ್ರಹಣ: ಬಿಹಾರದಲ್ಲಿ ಬುಧವಾರ ಎಂಟನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನಿತೀಶ್ ಕುಮಾರ್ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತಮ್ಮ ಸಿಎಂ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದರು.

ಭಾರತೀಯ ಜನತಾ ಪಕ್ಷದೊಂದಿಗಿನ ಮೈತ್ರಿ ಕಡಿದುಕೊಂಡ ನಿತೀಶ್ ಕುಮಾರ್ ಮಂಗಳವಾರವೇ ಸರ್ಕಾರದ ರಚನೆಗಾಗಿ ರಾಜ್ಯಪಾಲರಲ್ಲಿ ಹಕ್ಕು ಮಂಡಿಸಿದ್ದರು. ಅಂತಿಮವಾಗಿ ಆರ್ ಜೆಡಿ ಹಾಗೂ ಇತರೆ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ನೂತನ ಸರ್ಕಾರ ರಚಿಸುವುದಕ್ಕೆ ಇದೀಗ ನಿತೀಶ್ ಕುಮಾರ್ ಅಣಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+