ಪಾಟ್ನಾದಲ್ಲಿ ಬಿಹಾರ ಸಿಎಂ ಮೇಲೆ ಹಲ್ಲೆ: ವಿಡಿಯೋ ವೈರಲ್

ಪಾಟ್ನಾ, ಮಾರ್ಚ್ 27: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಲು ಯುವಕನೊಬ್ಬ ಮುಂದಾ‌ಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪಾಟ್ನಾ ಜಿಲ್ಲೆಯ ಭಕ್ತಿಯಾರ್‌ಪುರದಲ್ಲಿ ಮುಖ್ಯಮಂತ್ರಿ ಬಳಿ ನುಗ್ಗಲು ಯತ್ನ ಮಾಡಿದ ವ್ಯಕ್ತಿಯನ್ನು ಸಿಎಂ ಭದ್ರತಾ ಸಿಬ್ಬಂದಿ ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಘಟನೆಯು ಭಕ್ತಿಯಾರ್‌ಪುರ ಮಾರುಕಟ್ಟೆ ಸಮೀಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದಿದೆ ಎಂದು ವರದಿ ಉಲ್ಲೇಖ ಮಾಡಿದೆ. ಭದ್ರತಾ ಸಿಬ್ಬಂದಿಯನ್ನೂ ಯುವಕ ತಳ್ಳಿದ್ದಾನೆ ಎಂದು ಹೇಳಲಾಗುತ್ತಿದೆ. ಯುವಕನೊಬ್ಬನನ್ನು ಪೊಲೀಸರು ಕರೆದೊಯ್ದಿರುವ ವಿಡಿಯೋ ಕೂಡ ವೈರಲ್ ಆಗಿದೆ.

ಸಂಪೂರ್ಣ ಘಟನೆಯ ಬಗ್ಗೆ ಇದುವರೆಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಸದ್ಯ ಪೊಲೀಸರು ಈ ಯುವಕ ಯಾಕಾಗಿ ಈ ರೀತಿ ಮಾಡಿದ್ದಾನೆ, ಹಾಗೂ ಈ ಪ್ರಕರಣದ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Nitish Kumar Attacked By Man During Function At Hometown

ಈ ಪ್ರದೇಶದಲ್ಲಿ ಈ ಘಟನೆಯ ಬಗ್ಗೆ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿವೆ. ಪೊಲೀಸರು ವಿಚಾರಣೆ ಮೂಲಕ ಯುವಕನ ಉದ್ದೇಶ ಮತ್ತು ಹಿನ್ನೆಲೆ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಬಂದಿರುವ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ತಮ್ಮ ಹಳೆಯ ಸ್ನೇಹಿತರು ಮತ್ತು ಹೋರಾಟದ ಸಹಚರರಲ್ಲದೆ ಬಾರ್ಹ್ ಮತ್ತು ಭಕ್ತಿಯಾರ್‌ಪುರಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಸಾಮಾನ್ಯ ಜನರನ್ನು ಭೇಟಿಯಾಗುತ್ತಿದ್ದರು.

ಮುಖ್ಯಮಂತ್ರಿಗಳು ಹಲವೆಡೆ ಕಾಲ್ನಡಿಗೆಯಲ್ಲಿ ಸಂಚರಿಸುತ್ತಾ ಜನರನ್ನು ಭೇಟಿ ಮಾಡಿ ಅವರ ಮಾತುಗಳನ್ನು ಆಲಿಸಿದ್ದಾರೆ. ಮುಖ್ಯಮಂತ್ರಿಗಳ ಪಾದಯಾತ್ರೆಯ ವೇಳೆ ಭಕ್ತಿಯಾರ್‌ಪುರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸ್ವಗ್ರಾಮ ಭಕ್ತಿಯಾರ್‌ಪುರದಲ್ಲಿ ಭಾರೀ ಭದ್ರತಾ ಲೋಪ ಉಂಟಾಗಿದೆ.

ದಾಳಿಯ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾನೆ ಎಂದು ಮೂಲಗಳು ತಿಳಿಸಿವೆ. ಹಿಂದಿನಿಂದ ಬಂದ ವ್ಯಕ್ತಿ ವೇದಿಕೆಯ ಮೇಲೆ ಬಂದು ಪ್ರತಿಮೆಗೆ ಪುಷ್ಪನಮನ ಸಲ್ಲಿಸಲು ಬಾಗಿದ ನಿತೀಶ್‌ ಕುಮಾರ್‌ ಅವರಿಗೆ ಹೊಡೆಯುವುದು ವಿಡಿಯೋದಲ್ಲಿ ಕಂಡು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+