• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಆಗ್ರಹ

|
Google Oneindia Kannada News

ಪಾಟ್ನಾ, ಆಗಸ್ಟ್ 03: ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಇದೀಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಆಗ್ರಹಿಸಿದ್ದು, ವಿರೋಧ ಪಕ್ಷಗಳ ಹಾದಿಯನ್ನೇ ಹಿಡಿದಿದ್ದಾರೆ.

ಪತ್ರಕರ್ತರು, ನ್ಯಾಯಾಧೀಶರು, ರಾಜಕಾರಣಿಗಳು ಹಾಗೂ ಮತ್ತಿತರರು ಇಸ್ರೇಲಿ ಸ್ಪೈವೇರ್‌ಗಳ ದಾಳಿಗೆ ಗುರಿಯಾಗಿದ್ದರು ಎನ್ನಲಾದ ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಪ್ರತಿಪಕ್ಷಗಳು ಆಗ್ರಹಿಸಿದ್ದು, ಇದಕ್ಕೀಗ ಬಿಹಾರ ಮುಖ್ಯಮಂತ್ರಿ ಮತ್ತು ಬಿಜೆಪಿ ಮಿತ್ರ ನಿತೀಶ್ ಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ.

ಪೆಗಾಸಸ್ ಬೇಹುಗಾರಿಗೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ಚಿದಂಬರಂ 'ಸರಳ ಪ್ರಶ್ನೆ'ಪೆಗಾಸಸ್ ಬೇಹುಗಾರಿಗೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ಚಿದಂಬರಂ 'ಸರಳ ಪ್ರಶ್ನೆ'

ದೂರವಾಣಿ ಕದ್ದಾಲಿಕೆಯ ಬಗ್ಗೆ ಬಹಳ ದಿನಗಳಿಂದ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಚರ್ಚೆ ನಡೆಯಲೇಬೇಕು. ಆರಂಭದ ದಿನದಿಂದಲೇ ನಾನು ಇದನ್ನು ಹೇಳುತ್ತಿದ್ದೇನೆ. ಆದರೆ ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಸರ್ಕಾರ, ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದೆ. ಆದರೆ ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿಲ್ಲ. ಈ ಬಗ್ಗೆ ತನಿಖೆ ನಡೆಯಲೇಬೇಕು ಎಂದು ನಿತೀಶ್‌ ಕುಮಾರ್‌ ಹೇಳಿದ್ದಾರೆ.

ಈಗಿನ ದಿನಗಳಲ್ಲಿ ಇಂತಹುದನ್ನು (ಗೂಢಚರ್ಯೆ) ಯಾರು ಬೇಕಿದ್ದರೂ ವಿವಿಧ ರೀತಿಯಲ್ಲಿ ಮಾಡಬಹುದು. ಹಾಗಾಗಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇಡೀ ಪ್ರಕರಣದ ಎಲ್ಲ ಆಯಾಮಗಳನ್ನೂ ಪರಿಶೀಲನೆಗೆ ಒಳಪಡಿಸಬೇಕು' ಎಂದು ನಿತೀಶ್‌ ಹೇಳಿದ್ದಾರೆ. ನಿತೀಶ್ ಹೇಳಿಕೆಯ ಬಗ್ಗೆ ಹಲವಾರು ಪ್ರತಿಕ್ರಿಯೆಗಳು ಬಂದಿವೆ.

ಲಾಲು ಪ್ರಸಾದ್‌ ನೇತೃತ್ವದ ಆರ್‌ಜೆಡಿ ಈ ಹೇಳಿಕೆಯನ್ನು ಸ್ವಾಗತಿಸಿದೆ. ನಿತೀಶ್‌ ಅವರು ಈ ಹೇಳಿಕೆಯನ್ನು ಹಿಂದಕ್ಕೆ ಪಡೆಯಲಿಕ್ಕಿಲ್ಲ ಎಂಬ ವಿಶ್ವಾಸವನ್ನು ಪಕ್ಷವು ವ್ಯಕ್ತಪಡಿಸಿದೆ. ಬಿಜೆಪಿಗಿಂತ ಭಿನ್ನವಾದ ಹಲವು ನಿಲುವುಗಳನ್ನು ನಿತೀಶ್‌ ವ್ಯಕ್ತಪಡಿಸಿದ್ದಾರೆ.

ಪೆಗಾಸಸ್‌ ಕುತಂತ್ರಾಂಶ ಬಳಸಿ ಗೂಢಚರ್ಯೆ ನಡೆಸಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಗೆ ಆಡಳಿತಾರೂಢ ಎನ್‌ಡಿಎಯ ಅಂಗವಾಗಿರುವ ಜೆಡಿಯುನ ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ದನಿಗೂಡಿಸಿದ್ದಾರೆ.

ಸಂಸತ್ತಿನಲ್ಲಿ, ಪ್ರತಿಪಕ್ಷಗಳು ಒಗ್ಗಟ್ಟಾಗಿ ಆರೋಪದ ವಿರುದ್ಧ ಪ್ರತಿಭಟನೆ ನಡೆಸಲು ಮತ್ತು ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ನಿರಂತರವಾಗಿ ಒತ್ತಾಯಿಸುತ್ತಿವೆ. ಆದಾಗ್ಯೂ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೆಗಾಸಸ್ ಸ್ಪೈವೇರ್ ಅನ್ನು ಸಾರ್ವಜನಿಕ ವ್ಯಕ್ತಿಗಳ ಮೇಲೆ ಕಣ್ಣಿಡಲು ಬಳಸಲಾಗುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದೆ.
ಇದು ವರದಿಯನ್ನು ಸಂವೇದನಾಶೀಲ ಮತ್ತು ಭಾರತೀಯ ಪ್ರಜಾಪ್ರಭುತ್ವ ಮತ್ತು ಅದರ ಸುಸ್ಥಾಪಿತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಯತ್ನ ಎಂದೂ ಕರೆಯಲಾಗಿದೆ.

ಕಳೆದ ವಾರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈ ವಿವಾದವು "ಸಮಸ್ಯೆಯಲ್ಲ" ಎಂದು ಹೇಳಿದ್ದು ಸರ್ಕಾರವು ಜನ-ಸಂಬಂಧಿತ ವಿಷಯಗಳ ಕುರಿತು ಚರ್ಚೆಗೆ ಸಿದ್ಧವಾಗಿದೆ ಎಂದಿದ್ದಾರೆ

ಈ ನಡುವೆ ಈ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಆದೇಶಿಸಬೇಕು ಅಥವಾ ಈ ಬಗ್ಗೆ ತನಿಖೆ ನಡೆಸಲು ಹಾಲಿ ನ್ಯಾಯಾಧೀಶರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್‌ಗೆ ವಿನಂತಿಸಬೇಕು ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ಒತ್ತಾಯಿಸಿವೆ.

ನಿತೀಶ್ ಹೇಳಿಕೆಯ ಬಗ್ಗೆ ಹಲವಾರು ಪ್ರತಿಕ್ರಿಯೆಗಳು ಬಂದಿವೆ, ಲಾಲೂ ಪ್ರಸಾದ್ ನೇತೃತ್ವದ ಆರ್‌ಜೆಡಿ ಈ ಹೇಳಿಕೆಯನ್ನು ಸ್ವಾಗತಿಸಿದೆ. ನಿತೀಶ್ ಅವರು ಈ ಹೇಳಿಕೆಯನ್ನು ಹಿಂದಕ್ಕೆ ಪಡೆಯಲಿಕ್ಕಿಲ್ಲ ಎಂಬ ವಿಶ್ವಾಸವನ್ನು ಪಕ್ಷವು ವ್ಯಕ್ತಪಡಿಸಿದೆ. ಬಿಜೆಪಿಗಿಂತ ಭಿನ್ನವಾದ ಹಲವು ನಿಲುವುಗಳನ್ನು ನಿತೀಶ್ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಆಗಬೇಕು ಎಂದು ಅವರು ಹೊಂದಿರುವ ಆಕಾಂಕ್ಷೆಯ ಭಾಗ ಇದು ಎಂದು ಎಲ್‌ಜೆಪಿಯ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ನಿತೀಶ್ ಅವರನ್ನು ಲೇವಡಿ ಮಾಡುವುದಕ್ಕೂ ಈ ಸಂದರ್ಭದಲ್ಲಿ ಆರ್‌ಜೆಡಿ ಬಳಸಿಕೊಂಡಿದೆ. ನಿತೀಶ್‌ ಅವರು ತಮ್ಮ ನಿಲುವಿಗೆ ಬದ್ಧರಾಗಬೇಕು ಎಂದಿದೆ. ಒತ್ತಡ ಬಂದ ಬಳಿಕ, ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂಬ ಹೇಳಿಕೆಯನ್ನು ಅವರು ನೀಡಬಾರದು ಎಂದು ಆರ್‌ಜೆಡಿ ಹೇಳಿದೆ.

ಆದರೆ, ನಿತೀಶ್ ಕುಮಾರ್ ಅವರು ತಮ್ಮ ಹೇಳಕೆಯನ್ನು ಜೆಡಿಯು ಮುಖಂಡರು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿಯ ನಿಲುವಿಗಿಂತ ಭಿನ್ನವಾದ ನಿಲುವನ್ನು ಜೆಡಿಯು ಹಿಂದೆಯೂ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

English summary
Bihar Chief Minister Nitish Kumar, an important ally and coalition partner of the BJP, on Monday threw his weight behind the Opposition’s demand for a debate in Parliament on the Pegasus surveillance controversy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X