ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ ಸಿಎಂ ಯಾರು ಎಂಬುದು ಎನ್ ಡಿಎ ತೀರ್ಮಾನ: ನಿತೀಶ್

|
Google Oneindia Kannada News

ಪಾಟ್ನಾ, ನವೆಂಬರ್.12: ಬಿಹಾರದಲ್ಲಿ ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ಯಾವಾಗ ಎಂಬುದರ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ದೀಪಾವಳಿ ನಂತರದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಸುವ ಬಗ್ಗೆ ರಾಜಕೀಯ ವಲಯದಲ್ಲಿ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆ ನಿತೀಶ್ ಕುಮಾರ್ ಈ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿನ ಚುನಾವಣೆ ಗೆಲುವಿನ ಬಗ್ಗೆ ಪರಾಮರ್ಶೆ ನಡೆಸುವ ಸಮಯವಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಎನ್ ಡಿಎ ಮೈತ್ರಿಕೂಟದ ನಾಲ್ಕೂ ಬಿಜೆಪಿ, ಜೆಡಿಯು, ವಿಐಪಿ ಮತ್ತು ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷಗಳ ಸಭೆ ನಡೆಸಲಾಗುತ್ತದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಎನ್‌ಡಿಎ ಗೆದ್ದಿದ್ದು ಹಣ, ತೋಳ್ಬಲದಿಂದ: ತೇಜಸ್ವಿ ಯಾದವ್ ಆರೋಪಎನ್‌ಡಿಎ ಗೆದ್ದಿದ್ದು ಹಣ, ತೋಳ್ಬಲದಿಂದ: ತೇಜಸ್ವಿ ಯಾದವ್ ಆರೋಪ

ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ನಿತೀಶ್ ಕುಮಾರ್ ಉತ್ತರವು ಅಚ್ಚರಿ ಮೂಡಿಸುವಂತಿತ್ತು. "ನಾನು ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾವುದೇ ಹಕ್ಕು ಮಂಡಿಸಿಲ್ಲ, ಎಲ್ಲವನ್ನೂ ಎನ್ ಡಿಎ ಮೈತ್ರಿಕೂಟವು ತೀರ್ಮಾನಿಸಲಿದೆ" ಎಂದು ಹೇಳಿದರು.

Nitish Kumar Clarification About Chief Minister Oath Ceremony Function In Bihar

ನವೆಂಬರ್.16ಕ್ಕೆ ಸಿಎಂ ಪದಗ್ರಹಣ?:

ಬಿಹಾರದ 37ನೇ ಮುಖ್ಯಮಂತ್ರಿಯಾಗಿ 7ನೇ ಬಾರಿಗೆ ನಿತೀಶ್ ಕುಮಾರ್ ಅವರು ನವೆಂಬರ್.16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಎನ್‌ಡಿಎ ಮೈತ್ರಿಕೂಟ ಪೂರ್ಣ ಬಹುಮತ ಪಡೆದಿದ್ದು, ಮುಂದಿನ ಸರ್ಕಾರವನ್ನು ರಚಿಸುವ ವಿಧಾನಗಳನ್ನು ಅಂತಿಮಗೊಳಿಸಲು ಬಿಜೆಪಿ ಮತ್ತು ಜೆಡಿಯು ಪಕ್ಷದ ಹಿರಿಯ ನಾಯಕರು ಪರಸ್ಪರ ಸಂವಹನ ನಡೆಸಲ್ಲಿದ್ದಾರೆ.

ಬಿಹಾರ ಮತದಾರರು ನೀಡಿರುವ ತೀರ್ಪಿನ ವಿವರ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಈ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಅದರಲ್ಲಿ ರಾಷ್ಟ್ರೀಯ ಜನತಾ ದಳ 75, ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.

English summary
Nitish Kumar Clarification About Chief Minister Oath Ceremony Function In Bihar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X