ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈತ್ರಿಕೂಟದಿಂದ ಹೊರಬಂದ ನಿತೀಶ್ ಕುಮಾರ್ : ಇದು ಎಷ್ಟನೇ ಬಾರಿ ಗೊತ್ತಾ?

|
Google Oneindia Kannada News

ನವದೆಹಲಿ, ಆಗಸ್ಟ್ 09: ಮೈತ್ರಿ ಮಾಡಿಕೊಳ್ಳುವುದು ಮತ್ತು ಮೈತ್ರಿ ಸರ್ಕಾರವನ್ನು ಅರ್ಧದಲ್ಲೇ ಬೀಳಿಸುವುದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಹೊಸ ವಿಚಾರವೇ ಅಲ್ಲ. ಅವರ ರಾಜಕೀಯ ಇತಿಹಾಸ ಗೊತ್ತಿದ್ದವರಿಗೆ ಅವರು ಅದೆಷ್ಟು ಬಾರಿ ಹಲವು ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ನಂತರ ಹೊರಬಂದಿದ್ದಾರೆ ಎನ್ನುವುದು ಗೊತ್ತಿದೆ.

1985ರಲ್ಲಿ ವಿಧಾನಸಭೆಗೆ ಮೊದಲ ಬಾರಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ ನಿತೀಶ್ ಕುಮಾರ್ ಎಲ್ಲಾ ಪಕ್ಷಗಳ ಜೊತೆ ಸ್ನೇಹ ಮಾಡಿಕೊಂಡಿದ್ದಾರೆ. ಎಲ್ಲಾ ಪಕ್ಷಗಳ ಜೊತೆ ಮುನಿಸಿಕೊಂಡಿದ್ದಾರೆ. ಈಗ ಸದ್ಯ ಬಿಜೆಪಿ ಜೊತೆ ಸೇರಿ ಎನ್‌ಡಿಎ ಸರ್ಕಾರ ರಚನೆ ಮಾಡಿದ್ದ ಅವರು, ಸಿಎಂ ಪದವಿಗೆ ರಾಜೀನಾಮೆ ನೀಡಿ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬಂದಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಅಂತ್ಯ :ರಾಜ್ಯಪಾಲ ಫಾಗು ಚೌಹಾಣ್ ಭೇಟಿ ಮಾಡಲಿರುವ ನಿತೀಶ್ ಕುಮಾರ್ಬಿಜೆಪಿ ಜೊತೆ ಮೈತ್ರಿ ಅಂತ್ಯ :ರಾಜ್ಯಪಾಲ ಫಾಗು ಚೌಹಾಣ್ ಭೇಟಿ ಮಾಡಲಿರುವ ನಿತೀಶ್ ಕುಮಾರ್

ಯೂ ಟರ್ನ್ ತೆಗೆದುಕೊಳ್ಳುವುದರಲ್ಲಿ ನಿತೀಶ್ ಕುಮಾರ್ ಗೆ ಅವರೇ ಸಾಟಿ, ಬಿಜೆಪಿಗೆ ಗುಡ್‌ ಬೈ ಹೇಳಿರುವ ಅವರು ಈಗ ಕಾಂಗ್ರೆಸ್, ರಾಷ್ಟ್ರೀಯ ಜನತಾ ದಳ ಜೊತೆಗೂಡಿ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಈಗಾಗಲೇ ಬಿಹಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿರುವ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಸಂಬಂಧಕ್ಕೆ ಅಂತ್ಯ ಹಾಡಿದ್ದಾರೆ.

Nitish Kumar Is Not New To Making Alliances And Breaking The Coalition Government In Mid

2016ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಆರ್ ಜೆಡಿ, ಕಾಂಗ್ರೆಸ್ ಬೆಂಬಲದೊಂದಿಗೆ ಬಿಹಾರದಲ್ಲಿ ಸರ್ಕಾರ ರಚನೆ ಮಾಡಿದ್ದರು. ಆದರೆ, ಜುಲೈ 26, 2017 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಮೈತ್ರಿಯಿಂದ ಹೊರಬಂದರು.

ನಂತರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದರು. 2021ರ ಚುನಾವಣೆಯಲ್ಲಿ, ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿ ಜೊತೆಗೂಡಿ ಚುನಾವಣೆ ಎದುರಿಸಿತು. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿ (ಯು) ಕೇವಲ 43 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು, ಆದರೂ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿತು. ಈಗ ಬಿಜೆಪಿಯೊಂದಿಗಿನ ಮೈತ್ರಿಗೂ ಅಂತ್ಯ ಹಾಡಿದೆ.

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಯೇ ನಿತೀಶ್ ಕುಮಾರ್ ಅವರ ರಾಜಕೀಯ ಇತಿಹಾಸದ ಪ್ರಮುಖ ಘಟನೆಗಳ ಪಟ್ಟಿ ಇಲ್ಲಿದೆ.

Nitish Kumar Is Not New To Making Alliances And Breaking The Coalition Government In Mid

1985: ನಿತೀಶ್ ಕುಮಾರ್ ಮೊದಲ ಬಾರಿಗೆ ಬಿಹಾರ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು.

1989: ನಿತೀಶ್ ಕುಮಾರ್ ಅವರು ಲಾಲು ಪ್ರಸಾದ್ ಅವರನ್ನು ಬೆಂಬಲಿಸಿದರು ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದರು.

1996: ನಿತೀಶ್ ಕುಮಾರ್ ಬಿಜೆಪಿಯನ್ನು ಬೆಂಬಲಿಸಿದರು.

2000: ನಿತೀಶ್ ಮೊದಲ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. 151 ಶಾಸಕರೊಂದಿಗೆ ಎನ್‌ಡಿಎಗೆ ಆಗಿನ 324 ಸದಸ್ಯ ಸದನದಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಅವರು ಸಂಖ್ಯೆಗಳನ್ನು ಸಾಬೀತುಪಡಿಸುವ ಮೊದಲು ರಾಜೀನಾಮೆ ನೀಡಿದರು

1988 ರಿಂದ 2004: ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರೈಲ್ವೆ, ಸಾರಿಗೆ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದರು.

2004: ನಳಂದದಿಂದ ಆರನೇ ಅವಧಿಗೆ ಲೋಕಸಭೆಗೆ ಮರು ಆಯ್ಕೆಯಾದರು.

ನವೆಂಬರ್ 2005: ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡುವ ಮೂಲಕ ನಿತೀಶ್ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು

ಜೂನ್ 2013: ನರೇಂದ್ರ ಮೋದಿಯೇ ಪ್ರಧಾನಿ ಅಭ್ಯರ್ಥಿ ಎಂದು ಸ್ಪಷ್ಟವಾದ ನಂತರ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದರು

2014: ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದರು ಮತ್ತು ಜಿತನ್ ರಾಮ್ ಮಾಂಝಿ ಅವರನ್ನು ಸಿಎಂ ಆಗಿ ನೇಮಿಸಲಾಯಿತು

ಫೆಬ್ರವರಿ 2015: ನಿತೀಶ್ ಅವರ JD(U) ಲಾಲು ಪ್ರಸಾದ್ ಯಾದವ್ ನೇತೃತ್ವದಲ್ಲಿ ಆರ್ ಜೆಡಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ. ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಸಿಎಂ ಆಗುತ್ತಾರೆ.

ಜುಲೈ 2016: ನಿತೀಶ್ ಮತ್ತೊಂದು ಯೂ-ಟರ್ನ್ ತೆಗೆದುಕೊಂಡ ನಿತೀಶ್ ಕುಮಾರ್ ಮೈತ್ರಿ ಮುರಿದುಕೊಂಡರು, ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದರು

2020: ಬಿಜೆಪಿಯೊಂದಿಗೆ ಚುನಾವಣೆಗೆ ಸ್ಪರ್ಧಿಸಿ ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಚುನಾವಣೆಯಲ್ಲಿ ಜೆಡಿಯು ಕೇವಲ 43 ಸ್ಥಾನಗಳನ್ನು ಗಳಿಸಿದ್ದು, ಬಿಜೆಪಿ 74 ಸ್ಥಾನಗಳನ್ನು ಗೆದ್ದಿದೆ.

2022: ಹಲವು ಕಾರಣಗಳಿಂದ ಬಿಜೆಪಿ ಜೊತೆ ಮುನಿಸಿಕೊಂಡಿದ್ದ ನಿತೀಶ್ ಕುಮಾರ್ ಅಂತಿಮವಾಗಿ ಆಗಸ್ಟ್ 9ರಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಎನ್‌ಡಿಎ ಕೂಟದಿಂದ ಹೊರಬಂದರು. ಆರ್ ಜೆಡಿ ಮತ್ತು ಕಾಂಗ್ರೆಸ್ ಜೆಡಿಯುಗೆ ಬೆಂಬಲ ನೀಡಿದ್ದು, ಮಹಾಘಟಬಂಧನ್‌ ಸರ್ಕಾರ ರಚನೆಯಾಗಲಿದೆ.

English summary
Bihar Chief Minister Nitish Kumar is not new to making alliances and breaking the coalition government in mid. Those who know his political history know that he has formed alliances with many parties and then pulled out.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X