ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.16ಕ್ಕೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ

|
Google Oneindia Kannada News

ಪಾಟ್ನಾ, ನವೆಂಬರ್ 12: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇದೇ ನವೆಂಬರ್ 16 ರಂದು ಏಳನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಆದರೂ ಇದು ಬಿಹಾರದ ಮುಖ್ಯಮಂತ್ರಿಯಾಗಿ ಅವರ ನಾಲ್ಕನೇ ಪೂರ್ಣ ಅವಧಿಯಾಗಿದೆ.

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಪೂರ್ಣ ಬಹುಮತ ಪಡೆದಿದ್ದು, ಮುಂದಿನ ಸರ್ಕಾರವನ್ನು ರಚಿಸುವ ವಿಧಾನಗಳನ್ನು ಅಂತಿಮಗೊಳಿಸಲು ಬಿಜೆಪಿ ಮತ್ತು ಜೆಡಿಯು ಪಕ್ಷದ ಹಿರಿಯ ನಾಯಕರು ಪರಸ್ಪರ ಸಂವಹನ ನಡೆಸಲ್ಲಿದ್ದಾರೆ.

ಬಿಹಾರದಲ್ಲಿ 7ನೇ ಬಾರಿ ಸಿಎಂ ಆಗಿರುವ ನಿತೀಶ್ ಕುಮಾರ್ ರಾಜಕೀಯ ಇತಿಹಾಸ ಬಿಹಾರದಲ್ಲಿ 7ನೇ ಬಾರಿ ಸಿಎಂ ಆಗಿರುವ ನಿತೀಶ್ ಕುಮಾರ್ ರಾಜಕೀಯ ಇತಿಹಾಸ

ಮೂಲಗಳ ಪ್ರಕಾರ, ಬಿಜೆಪಿ ಮತ್ತು ಜೆಡಿಯು ಪಕ್ಷಗಳ ಮುಖಂಡರುಗಳು ಬಿಹಾರದ ರಾಜ್ಯಪಾಲರನ್ನು ಯಾವಾಗ ಭೇಟಿಯಾಗಬೇಕು ಮತ್ತು ಸರ್ಕಾರ ರಚಿಸುವ ಹಕು ಮಂಡಿಸುವ ಬಗ್ಗೆ ಮಾತುಕತೆ ನಡೆಸುತ್ತಿವೆ.

Nitish Kumar May As A Bihar CM Take Oath Possibility On November 16

243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ 125 ಸ್ಥಾನಗಳನ್ನು ಗೆದ್ದ ನಂತರ ಮತ್ತೆ ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ಎನ್‌ಡಿಎ ಮೈತ್ರಿಕೂಟ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿತ್ತು. ಜೆಡಿಯು ಹಿರಿಯ ಪಾಲುದಾರನಾಗಿ ಸ್ಪರ್ಧಿಸಿದ್ದರೂ, ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಪಡೆದಿದೆ.

ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವ ಸಾಧ್ಯತೆಯಿದ್ದು, ಹೆಚ್ಚು ಸ್ಥಾನಗಳನ್ನು ಪಡೆದಿರುವ ಬಿಜೆಪಿ ಹೊಸ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವ್ಯವಸ್ಥೆಯಲ್ಲಿ ಹೆಚ್ಚಿನ ಅಧಿಕಾರ ನಿರೀಕ್ಷೆಯಿದೆ.

ಆರಂಭದಲ್ಲಿ ಎನ್‌ಡಿಎ ಮೈತ್ರಿಕೂಟದ ಬಿಜೆಪಿ, ಜೆಡಿಯು, ಎಚ್‌ಎಎಂ ಮತ್ತು ವಿಐಪಿಯ ಎಲ್ಲಾ ಘಟಕ ಪಾಲುದಾರರು ತಮ್ಮ ಹೊಸದಾಗಿ ಚುನಾಯಿತರಾದ ಶಾಸಕರ ಸಭೆಯನ್ನು ಕರೆಯಲಿದೆ. ನಂತರ ಎನ್‌ಡಿಎ ಶಾಸಕರ ಜಂಟಿ ಸಭೆ ನಡೆಯಲಿದೆ. ಜಂಟಿ ಎನ್‌ಡಿಎ ಸಭೆಯ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲ.

ಹೊಸ ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ಹೇಗೆ ಕಾಣುತ್ತದೆ ಎಂಬುದನ್ನು ಚರ್ಚಿಸಲು ಉನ್ನತ ಬಿಜೆಪಿ ಮತ್ತು ಜೆಡಿಯು ನಾಯಕರು ಈಗಾಗಲೇ ಆರಂಭಿಕ ಮಾತುಕತೆಗಳನ್ನು ಪ್ರಾರಂಭಿಸಿದ್ದಾರೆ.

ಬಿಹಾರ ರಾಜ್ಯ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಮತ್ತು ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಬುಧವಾರ ಹಿಂದೂಸ್ತಾನಿ ಆವಮ್ ಮೋರ್ಚಾ (ಎಚ್‌ಎಎಂ) ಮುಖ್ಯಸ್ಥ ಜಿತನ್ ರಾಂ ಮಾಂಜಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ನಿತೀಶ್ ಕುಮಾರ್ ಸರ್ಕಾರದಲ್ಲಿ HAM ನ ಪ್ರಾತಿನಿಧ್ಯದ ಬಗ್ಗೆ ಆರಂಭಿಕ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.

English summary
The NDA alliance in Bihar has a full majority and senior leaders of the BJP and JDU have interacted with each other to finalize the process of forming the next government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X