• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜೆಡಿಯು ನೂತನ ಅಧ್ಯಕ್ಷರಾಗಿ ನಿತೀಶ್ ಕುಮಾರ್ ಆಪ್ತ ಆರ್‌ಸಿಪಿ ಸಿಂಗ್ ಆಯ್ಕೆ

|

ಜೆಡಿಯು ನೂತನ ಅಧ್ಯಕ್ಷರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತ ಆರ್‌ಸಿಪಿ ಸಿಂಗ್ ಆಯ್ಕೆಯಾಗಿದ್ದಾರೆ.

ಜೆಡಿಯು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಇತ್ತೀಚೆಗೆ ಪಕ್ಷದ ಆರು ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದ ವಿಷಯ ಸೇರಿದಂತೆ ಪಕ್ಷ ಮುಂದೆ ತೆಗೆದುಕೊಳ್ಳಬಹುದಾದ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ.

ನಿತೀಶ್ ಕುಮಾರ್ ಅಧ್ಯಕ್ಷ ಸ್ಥಾನಕ್ಕೆ ಆರ್ ಸಿಪಿ ಸಿಂಗ್ ಹೆಸರನ್ನು ಪ್ರಸ್ತಾಪಿಸಿದ್ದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಇತರ ಸದಸ್ಯರು ಇದನ್ನು ಅನುಮೋದಿಸಿದರು ಎಂದು ಹಿರಿಯ ಮುಖಂಡರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

2019ರಲ್ಲಿ ಜೆಡಿಯು ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಆರ್ ಸಿಪಿ ಸಿಂಗ್ ಅವರಿಗಾಗಿ ಹುದ್ದೆಯನ್ನು ತ್ಯಜಿಸಿದ್ದರು. ಆರ್ ಸಿಪಿ ಸಿಂಗ್ ಇಲ್ಲಿಯವರೆಗೆ ಪ್ರಾದೇಶಿಕ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ನೆರೆಯ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯೂ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹಿರಿಯ ನಾಯಕ ತಿಳಿಸಿದ್ದಾರೆ.

English summary
RCP Singh, a close confidant of Bihar Chief Minister Nitish Kumar, was on Sunday chosen as the new president of Janata Dal (United). Kumar had proposed the name of Singh for the top post, which was then approved by other members during the party's national executive meeting, a senior leader told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X