• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
LIVE

Nitish Kumar Swearing in Ceremony Live: ಬಿಹಾರದ 37ನೇ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

|

ಪಟ್ನಾ, ನವೆಂಬರ್ 16: ಸತತ ನಾಲ್ಕನೆಯ ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ 2000ನೇ ಇಸವಿಯಿಂದ ಈವರೆಗೂ ನಿತೀಶ್ ಕುಮಾರ್ ಏಳನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಅಲಂಕರಿಸಿದ್ದಾರೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

6 ಬಾರಿ ಮುಖ್ಯಮಂತ್ರಿ ಆಗಿರುವ ನಿತೀಶ್ ಕುಮಾರ್ ಜೀವನಚರಿತ್ರೆ

ಭಾನುವಾರ ನಡೆದ ಎನ್ ಡಿಎ ಮೈತ್ರಿಕೂಟದ ಶಾಸಕರ ಸಭೆಯಲ್ಲಿ ಚುನಾವಣಾ ಪೂರ್ವದಲ್ಲಿಯೇ ಘೋಷಿಸಿದಂತೆ ನಿತೀಶ್ ಕುಮಾರ್ ರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Nitish Kumar Swearing in Ceremony Live News and Updates In Kannada

ಬಿಹಾರದ 37ನೇ ಮುಖ್ಯಮಂತ್ರಿಯಾಗಿ ನಿತೀಶ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಗುತ್ತಿದ್ದಂತೆಯೇ ನಿತೀಶ್ ಕುಮಾರ್ ಕೆಲವು ದಿನಗಳ ಹಿಂದೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಹೊಸ ಸರ್ಕಾರ ರಚನೆ ಪ್ರಕ್ರಿಯೆಗೆ ನಾಂದಿ ಹಾಡಿದ್ದರು.ಇದೀಗ ನಾಲ್ಕನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ನಿತೀಶ್ ಕುಮಾರ್, ಮತ್ತೊಂದು ಹಂತದ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಿಹಾರ ರಾಜಕೀಯ ಮತ್ತು ಸರ್ಕಾರ ರಚನೆಯ ಕುರಿತು ಕ್ಷಣಕ್ಷಣದ ಮಾಹಿತಿ ನಿಮಗೆ ಇಲ್ಲಿ ಲಭ್ಯ.

Newest First Oldest First
6:19 PM, 16 Nov
ಬಿಹಾರ ನೂತನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಶುಭಾಷಯ.
6:05 PM, 16 Nov
ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನಿಂದ ತುಂಬಾ ಸಂತೋಷವಾಗಿದೆ. ಮುಂದಿನ 5 ವರ್ಷಗಳ ಕಾಲ ರಾಜ್ಯದ ಅಭಿವೃದ್ಧಿಗೆ ಸರ್ಕಾರವು ಶ್ರಮಿಸಲಿದೆ ಎಂದು ಬಿಹಾರ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
6:03 PM, 16 Nov
ಬಿಹಾರದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಹಾಗೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ.
5:39 PM, 16 Nov
ನಿತೀಶ್ ಕುಮಾರ್ ಜೀವನಚರಿತ್ರೆ:
ಬಿಹಾರದ 37ನೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಾಲ್ಯ, ಶಿಕ್ಷಣ, ಕೌಟುಂಬಿಕ ಹಾಗೂ ರಾಜಕೀಯ ಜೀವನದ ಕುರಿತು ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿರಿ.
5:15 PM, 16 Nov
ಬಿಜೆಪಿ ಮುಖಂಡ ಮಂಗಲ್ ಪಾಂಡೆ ಮತ್ತು ಅಮರೇಂದರ್ ಪ್ರತಾಸ್ ಸಿಂಗ್ ಸಂಪುಟ ಸಚಿವರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
5:09 PM, 16 Nov
ಹಿಂದೂಸ್ಥಾನ ಅವಂ ಮೋರ್ಚಾ ಮುಖ್ಯಸ್ಥ ಜಿತೆನ್ ರಾಮ್ ಮಾಂಝಿ ಪುತ್ರ ಸಂತೋಷ್ ಕುಮಾರ್ ಸುಮನ್ ಮತ್ತು ವಿಕಾಸಶೀಲ ಇನ್ಸಾನ್ ಪಕ್ಷದ ಮುಕೇಶ್ ಸಹನಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
5:07 PM, 16 Nov
ಜೆಡಿಯು ಮುಖಂಡರಾದ ವಿಜಯಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಅಶೋಕ್ ಚೌಧರಿ ಮತ್ತು ಮೇವಾಲಾಲ್ ಚೌಧರಿ ಸಂಪುಟ ಸಚಿವರಾಗಿ ಪದಗ್ರಹಣ ಮಾಡಿದರು.
5:05 PM, 16 Nov
ಬಿಹಾರದ ಉಪ ಮುಖ್ಯಮಂತ್ರಿ ಆಗಿ ತರ್ಕಿಶೋರ್ ಮತ್ತು ರೇಣು ದೇವಿ ಪ್ರಮಾಣವಚನ ಸ್ವೀಕರಿಸಿದರು.
4:43 PM, 16 Nov
ಬಿಹಾರದ 37ನೇ ಮುಖ್ಯಮಂತ್ರಿ ಆಗಿ 69 ವರ್ಷದ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್ ಡಿಎ ಮೈತ್ರಿಕೂಟದ ಮುಖ್ಯಮಂತ್ರಿ ಆಗಿ ನಾಲ್ಕನೇ ಅವಧಿಗೆ ನಿತೀಶ್ ಕುಮಾರ್ ಆಯ್ಕೆ ಆಗಿದ್ದಾರೆ.
4:39 PM, 16 Nov
7ನೇ ಬಾರಿ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಪ್ರಮಾಣವಚನ.
4:07 PM, 16 Nov
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಗೃಹ ಸಚಿವ ಅಮಿತ್ ಶಾ ಪಟ್ನಾದ ಬಿಜೆಪಿ ಕಚೇರಿಗೆ ಬಂದಿಳಿದಿದ್ದಾರೆ.
3:45 PM, 16 Nov
ಬಿಜೆಪಿ, ಜೆಡಿಯು, ಎಚ್‌ಎಎಂ ಮತ್ತು ವಿಐಪಿಯ ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
3:35 PM, 16 Nov
ಆಡಳಿತಾರೂಢ ಎನ್‌ಡಿಎ ವಿರುದ್ಧ ಜನರು ತೀರ್ಪು ನೀಡಿದ್ದಾರೆ. ಹೀಗಾಗಿ ನಿತೀಶ್ ಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ತಿಳಿಸಿದ್ದಾರೆ.
3:17 PM, 16 Nov
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯಿಂದ ಉಪ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿರುವ ತಾರ್ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.
2:08 PM, 16 Nov
ಹೊಸ ಸರ್ಕಾರದಲ್ಲಿ ಬಿಜೆಪಿ ಮತ್ತು ಜೆಡಿಯುದ 14 ಹೊಸ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
2:07 PM, 16 Nov
ಸಂಜೆ ನಾಲ್ಕು ಗಂಟೆಯಿಂದ ನಿತೀಶ್ ಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
10:30 AM, 16 Nov
ಇಬ್ಬರು ಉಪಮುಖ್ಯಮಂತ್ರಿಗಳು ಮತ್ತು ಸ್ಪೀಕರ್ ಸ್ಥಾನವನ್ನು ಬಿಜೆಪಿ ಪಡೆದುಕೊಳ್ಳುವ ಸಾಧ್ಯತೆ ಇದೆ.
10:14 AM, 16 Nov
ಯಾರ ಘನತೆಯನ್ನೂ ಅವರ ಹುದ್ದೆ ನಿರ್ಧರಿಸುವುದಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು, ಉಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುತ್ತಿರುವ ಸುಶೀಲ್ ಕುಮಾರ್ ಮೋದಿ ಅವರನ್ನು ಸಮಾಧಾನಪಡಿಸಿದ್ದಾರೆ.
9:43 AM, 16 Nov
ಬಿಹಾರ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.
9:13 AM, 16 Nov
ನಿತೀಶ್ ಸರ್ಕಾರದಲ್ಲಿ ಜೆಡಿಯುದ 12 ಮತ್ತು ಬಿಜೆಪಿಯ 18 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಿದೆ.
7:23 AM, 16 Nov
ಭಾನುವಾರ ಮಧ್ಯಾಹ್ನ ನಡೆದ ಎನ್‌ಡಿಎ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಅವಿರೋಧ ಆಯ್ಕೆ ಮಾಡಲಾಯಿತು. ಬಳಿಕ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚಿಸಲು ಅವಕಾಶ ಕೋರಿದರು.
7:23 AM, 16 Nov
ನಿತೀಶ್ ಕುಮಾರ್ ಅವರಿಗೆ ಬಿಹಾರ ರಾಜ್ಯಪಾಲ ಪಗು ಚೌಹಾಣ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
7:22 AM, 16 Nov
ಬೆಳಿಗ್ಗೆ 11.30ಕ್ಕೆ ಪಟ್ನಾದ ರಾಜ್ಯಪಾಲರ ಭವನದಲ್ಲಿ ನಿತೀಶ್ ಕುಮಾರ್ ಅವರು ಸತತ ನಾಲ್ಕನೆಯ ಅವಧಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

English summary
Nitish Kumar Swearing in as Bihar CM Ceremony Live News and Updates In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X