ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

8ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

|
Google Oneindia Kannada News

ಪಟ್ನಾ, ಆಗಸ್ಟ್ 10: ಎನ್‌ಡಿಎ ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಒಂದು ದಿನದ ನಂತರ ನಿತೀಶ್ ಕುಮಾರ್ ಬುಧವಾರ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Recommended Video

Bihar Politics : ಬಿಹಾರದ ಸಿಎಂ ನಿತೀಶ್ ಕುಮಾರ್ ಮಹಾ ಪಲ್ಟಿ ರಾಜಕೀಯ | Oneindia Kannada

ಪಟ್ನಾದ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ಲಾಲೂ ಪ್ರಸಾದ್ ಯಾದವ್ ಕುಟುಂಬಸ್ಥರು ಕೂಡ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಗಸ್ಟ್ 15ರ ನಂತರ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.ಅತಿದೊಡ್ಡ ಪಕ್ಷವಾಗಿರುವ, ಆರ್‌ಜೆಡಿ ಕ್ಯಾಬಿನೆಟ್‌ನಲ್ಲಿ ಪ್ರಮುಖ ಹುದ್ದೆಗಳನ್ನು ಮತ್ತು ಅಸೆಂಬ್ಲಿ ಸ್ಪೀಕರ್ ಹುದ್ದೆ ಹೊಂದುವ ನಿರೀಕ್ಷೆಯಲ್ಲಿದೆ.

ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಆರ್‌ಜೆಡಿ ನಾಯಕ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆ ನೀಡಲು ನಿರಾಕರಿಸಿದಾಗ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತು ಮಹಾಘಟಬಂಧನ್‌ನಿಂದ ಹೊರನಡೆದ ಐದು ವರ್ಷಗಳ ನಂತರ, ಜೆಡಿಯು ನಾಯಕ ನಿತೀಶ್ ಕುಮಾರ್ ಮಹಾಘಟಬಂಧನ್ ಮತ್ತು ತೇಜಸ್ವಿ ಜೊತೆಗೆ ಕೈಜೋಡಿಸಿದ್ದಾರೆ.

Nitish Kumar Take Oath As Chief Minister Of Bihar Tejaswi Yadav Take Oath As Dy Cm

ಬುಧವಾರ ಬಿಹಾರದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಕೇವಲ ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವುದಷ್ಟೇ ಅಲ್ಲ, ಇದು "2017-2020ರ ಜನಾದೇಶದ ಘರ್ ವಾಪ್ಸಿ" ಎಂದು ಆರ್‌ಜೆಡಿ ಸಂಸದ ಮನೋಜ್ ಝಾ ಹೇಳಿದ್ದಾರೆ.

ಮೂಲಗಳ ಪ್ರಕಾರ, ಬಿಹಾರ ಹೊಸ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ನಾಲ್ಕು ಸಚಿವ ಸ್ಥಾನಗಳ ಜೊತೆಗೆ, ಕಾಂಗ್ರೆಸ್ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಸಹ ಕೋರಿದೆ ಎಂದು ಹೇಳಲಾಗಿದೆ. ಆದರೆ ಇದಕ್ಕೆ ನಿತೀಶ್ ಕುಮಾರ್ ಸಮ್ಮತಿಸಿಲ್ಲ ಎಂದು ಹೇಳಲಾಗಿದೆ.

Nitish Kumar Take Oath As Chief Minister Of Bihar Tejaswi Yadav Take Oath As Dy Cm

ನಿತೀಶ್ ಕುಮಾರ್ ಅವರನ್ನು ಬಿಜೆಪಿ ದ್ರೋಹಿ ಎಂದು ಕರೆದು ಆಕ್ರೋಶ ವ್ಯಕ್ತಪಡಿಸಿದೆ. ಜೆಡಿಯು ನಾಯಕರ ದ್ರೋಹದ ವಿರುದ್ಧ ಬುಧವಾರ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

"ಏಳು ಪಕ್ಷಗಳ ಮಹಾಘಟಬಂಧನ್ (ಮಹಾಮೈತ್ರಿಕೂಟ) ನಿಕಟವಾಗಿ ಕೆಲಸ ಮಾಡುತ್ತದೆ" ಎಂದು ನಿತೀಶ್ ಕುಮಾರ್ ಮಂಗಳವಾರ ಹೇಳಿದ್ದಾರೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿ ಮಹಾಘಟಬಂಧನ್ ಬೆಂಬಲಿಸಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ನಿತೀಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

English summary
Nitish Kumar took the oath as the chief minister of Bihar for the 8th time on Wednesday, RJD leader Tejashwi Yadav took the oath as the deputy chief minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X