Video: ಬಿಹಾರದ 37ನೇ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಪದಗ್ರಹಣ

ಪಾಟ್ನಾ, ನವೆಂಬರ್.16: ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನಾಲ್ಕನೇ ಅವಧಿಗೆ ಆಯ್ಕೆಯಾಗಿದ್ದು, ರಾಜ್ಯದ 37ನೇ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಪಾಟ್ನಾದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಫಾಗು ಚೌವ್ಹಾಣ್ ಅವರು, ನೂತನ ಮುಖ್ಯಮಂತ್ರಿಗೆ ಪ್ರಮಾಣವಚನ ಬೋಧಿಸಿದರು. ಬಿಹಾರದಲ್ಲಿ ಏಳನೇ ಬಾರಿ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಪದಗ್ರಹಣ ಮಾಡಿದರು.

ನಿತೀಶ್ ಕುಮಾರ್ ನೇತೃತ್ವದ ಸರ್ಕಾರದಲ್ಲಿ ಈ ಬಾರಿ ಇಬ್ಬರು ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಸುಶೀಲ್ ಮೋದಿ ಬದಲಿಗೆ ಈ ಬಾರಿ ತರ್ಕಿಶೋರ್ ಪ್ರಸಾದ್ ಹಾಗೂ ರೇಣು ದೇವಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡುವುದಕ್ಕೆ ಎನ್ ಡಿಎ ಮೈತ್ರಿಕೂಟದಲ್ಲಿ ತೀರ್ಮಾನಿಸಲಾಗಿದೆ.

Nitish Kumar Takes Oath As The CM Of Bihar For The Seventh Time.

ಎನ್ ಡಿಎ ಮೈತ್ರಿಕೂಟಕ್ಕೆ ಗೆಲುವು:

243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಎನ್ ಡಿಎ 125 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದಿದ್ದು, ಬಿಹಾರದ 37ನೇ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಪದಗ್ರಹಣ ಮಾಡಲಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.

ಬಿಹಾರದಲ್ಲಿ ಮುಖ್ಯಮಂತ್ರಿ ಆಗಿ 69 ವರ್ಷದ ನಿತೀಶ್ ಕುಮಾರ್ ಈಗಾಗಲೇ ಮೂರು ಅವಧಿ ಪೂರ್ಣಗೊಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+