ಮೋದಿಯನ್ನು ಭೇಟಿಯಾಗಲಿದ್ದಾರೆ ನಿತೀಶ್, ಯಾದವ್: ಬೇಡಿಕೆ ಒಂದೇ
ಪಾಟ್ನಾ, ಆಗಸ್ಟ್ 21: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಮುಖಂಡ ತೇಜಸ್ವಿ ಯಾದವ್ ಒಂದೇ ಬೇಡಿಕೆಯನ್ನು ಮುಂದಿಟ್ಟುಕೊಂಡು ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿ ರಾಜ್ಯದಿಂದ ಸರ್ವಪಕ್ಷ ನಿಯೋಗದ ನೇತೃತ್ವ ಹೊತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದಾರೆ. ಈ ತಂಡದಲ್ಲಿ ಬಿಹಾರ ರಾಜ್ಯ ಸರ್ಕಾರದ ಕಟ್ಟ ಟೀಕಾಕಾರರು ದ ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಕೂಡಾ ಇರಲಿದ್ದಾರೆ. ಇನ್ನು ರಾಜ್ಯದ ಗಣಿ ಸಚಿವ ಜಾಣಕಿ ರಾಮ ಹಾಗೂ ಬಿಜೆಪಿ ಶಾಸಕರು ಕೂಡಾ ಈ ನಿಯೋಗದಲ್ಲಿ ಇರಲಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಶನಿವಾರ ಪಾಟ್ನಾದಲ್ಲಿ ಮಾಹಿತಿ ನೀಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, "ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಭೇಟಿಗೆ ಅವಕಾಶ ನೀಡಿದ್ದಾರೆ," ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ''ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಮಯವಕಾಶ ನೀಡದಿರುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಅವಮಾನ ಮಾಡಿದ್ದಾರೆ,'' ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಮುಖಂಡ ತೇಜಸ್ವಿ ಯಾದವ್ ಆರೋಪ ಮಾಡಿದ್ದರು.

"ಪ್ರಸ್ತುತ ನಾವು ಸೆನ್ಸನ್ ಅನ್ನು ಜಾತಿ ಆಧಾರದಲ್ಲಿ ಮಾಡುವಂತೆ ಒತ್ತಾಯಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದೇವೆ. ಈ ಬಗ್ಗೆ ನಿರ್ಧಾರ ಕೈಗೊಳ್ಳುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ," ಎಂದು ನಿತೀಶ್ ಕುಮಾರ್ ಹೇಳಿದರು. ಹಾಗೆಯೇ "ಈ ಜಾತಿ ಗಣತಿಯನ್ನು ರಾಷ್ಟ್ರದಾದ್ಯಂತ ಮಾಡಿದರೆ ಇದು ಬಹಳ ಉಪಯುಕ್ತ," ಎಂದು ಕೂಡಾ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದರು. ಈ ರೀತಿಯ ಜನಗಣತಿಗೆ ಹೆಚ್ಚಿನ ಬೇಡಿಕೆ ಇದೆ ಎಂದಿದ್ದಾರೆ.
ಇಂತಹ ನಿಯೋಗದ ಕಲ್ಪನೆಯನ್ನು ಯಾದವ್ ನೇತೃತ್ವದ ಮಹಾಘಟ ಬಂಧನ ಮೈತ್ರಿಕೂಟವು ಪ್ರಸ್ತಾಪಿಸಿದೆ. ಈ ಹಿನ್ನೆಲೆ ಪ್ರಧಾನಿ ಮೋದಿಯ ಜೊತೆ ಔಪಚಾರಿಕ ಭೇಟಿಗೆ ಕಾರಣವಾಗಿದೆ. ಬಿಹಾರದಲ್ಲಿ ಎನ್‌ಡಿಎ ಒಕ್ಕೂಟದಲ್ಲಿ ಬಿಜೆಪಿಯು ಕೂಡಾ ಇದೆ. ಇನ್ನು ಈ ಒಕ್ಕೂಟದ ಭೇಟಿಯು ಪ್ರಧಾನಿ ನರೇಂದ್ರ ಮೋದಿಯ ಪಕ್ಷವು ಜಾತಿ ಆಧಾರಿತ ಜನ ಗಣತಿಯನ್ನು ಮಾಡದಿರಲು ಬಯಸುವುದಿಲ್ಲ ಎಂಬ ಸೂಚನೆಯನ್ನು ನೀಡಿದೆ.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಸ್ಥಗಿತಗೊಂಡಿರುವ ಜನಗಣತಿ ಕಾರ್ಯಾಚರಣೆಗಳು ಶೀಘ್ರದಲ್ಲೇ ಪುನರಾರಂಭಗೊಳ್ಳಲಿವೆ. ಉತ್ತರ ಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢದಂತಹ ದೊಡ್ಡ ರಾಜ್ಯಗಳು ಹಾಗೂ ಮಿಜೋರಾಂ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಂತಹ ಸಣ್ಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಜನಗಣತಿ ನಡೆಯಲಿದೆ ಎಂದು ಹೇಳಲಾಗಿದೆ. ಇನ್ನು ಈ ಜನಗಣತಿಯ ಹಿನ್ನೆಲೆ ಗೃಹ ವ್ಯವಹಾರಗಳ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಅನುಗುಣವಾದ ಖಾಲಿ ಹುದ್ದೆಗಳನ್ನು ಕೂಡ ಭರ್ತಿ ಮಾಡಲಾಗಿದೆ.
ಈ ಜನಗಣತಿ ಕಾರ್ಯಾಚರಣೆಯಲ್ಲಿ ಜಾತಿ ಎಣಿಕೆಗೆ ಹೊಸ ಬೇಡಿಕೆಗಳು ಇರುವುದರಿಂದ ಕೇಂದ್ರ ಸರ್ಕಾರ ಜನಗಣತಿಯ ಕೆಲಸವನ್ನು ಪುನರುಜ್ಜೀವನಗೊಳಿಸಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಜಾತಿ ಎಣಿಕೆಗೆ ಹೊಸ ಬೇಡಿಕೆಯನ್ನು ಮಾಡಿದ್ದಾರೆ. ಬಿಹಾರ ರಾಜ್ಯದ ವಿರೋಧ ಪಕ್ಷದ ನಾಯಕರು ಕೂಡಾ ಮುಖ್ಯಮಂತ್ರಿ ನಿತೀಶ್ ಕುಮಾರ್‌ರ ಈ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಆದರೆ ಜಾತಿ ಜನಗಣತಿಯ ಬೇಡಿಕೆಯ ನಡುವೆ ಕೇಂದ್ರ ಸರ್ಕಾರ ತರಾತುರಿಯಲ್ಲಿ ಈ ಜನಗಣಿತಯನ್ನು ಮಾಡಲು ಮುಂದಾಗಿದೆ ಎಂದು ಹೇಳಲಾಗಿದೆ.
(ಒನ್ ಇಂಡಿಯಾ)












Click it and Unblock the Notifications