ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸತತ ನಾಲ್ಕನೇ ಬಾರಿಗೆ ಸಿಎಂ ಆಗಲಿರುವ ನಿತೀಶ್ ಕುಮಾರ್

|
Google Oneindia Kannada News

ಪಾಟ್ನಾ, ನ. 15: ಕೊವಿಡ್ 19 ಸಂದರ್ಭದಲ್ಲಿ ಚುನಾವಣೆ ನಡೆದು ಫಲಿತಾಂಶವೂ ಹೊರ ಬಂದಿದೆ. ಎನ್ಡಿಎ ಶಾಸಕರ ಸಭೆಯಲ್ಲಿ ಶಾಸಕಾಂಗ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದಂತೆ ನಿತೀಶ್ ಅವರನ್ನು ಮತ್ತೊಮ್ಮೆ ಸಿಎಂ ಸ್ಥಾನ ನೀಡಲು ಎನ್ಡಿಎ ಮುಂದಾಗಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಸರ್ವೋಚ್ಛ ತೀರ್ಪುದಾರರು ಎಂದು ಮತ್ತೊಮ್ಮೆ ಸಾಬೀತಾಗಿದೆ ಎಂದು ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ಸ್ಥಾಪನೆಗೆ ಬೇಕಾದ ಅಗತ್ಯ ಬಹುಮತವಿದೆ ಎಂದು ಹಕ್ಕು ಮಂಡನೆ ಮಾಡಲು ನಿತೀಶ್ ಮುಂದಾಗುತ್ತಿದ್ದಾರೆ.

Nitish Kumar To Be Chief Minister For 4th Term to Take Oath Nov 16

ಮತ್ತೊಮ್ಮೆ ನಿತೀಶ್ ಸಿಎಂ:
ಬಿಹಾರದ 37ನೇ ಮುಖ್ಯಮಂತ್ರಿ, ಸತತ 4ನೇ ಬಾರಿ ಒಟ್ಟು 7ನೇ ಅವಧಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪದಗ್ರಹಣ ಮಾಡಲಿದ್ದಾರೆ. ಸದ್ಯಕ್ಕೆ ಸೋಮವಾರ(ನ.16) ಪ್ರಮಾಣ ವಚನ ಸ್ವೀಕಾರ ಸಮಾಂಭ ನಿಗದಿಯಾಗಿದೆ.

ಬಿಹಾರದಲ್ಲಿ 7ನೇ ಬಾರಿ ಸಿಎಂ ಆಗಿರುವ ನಿತೀಶ್ ಕುಮಾರ್ ರಾಜಕೀಯ ಇತಿಹಾಸಬಿಹಾರದಲ್ಲಿ 7ನೇ ಬಾರಿ ಸಿಎಂ ಆಗಿರುವ ನಿತೀಶ್ ಕುಮಾರ್ ರಾಜಕೀಯ ಇತಿಹಾಸ

ಬಿಹಾರದ 243 ವಿಧಾನಸಭಾ ಸದಸ್ಯ ಬಲವಿದ್ದು, ಯಾವದೇ ಪಕ್ಷಕ್ಕೆ ಸರ್ಕಾರ ರಚಿಸಲು ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳು ಬೇಕು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಎನ್ ಡಿಎ ಮೈತ್ರಿಕೂಟಕ್ಕೆ ಸಿಎಂ ಕುರ್ಚಿ ಖಾತ್ರಿಯಾಗಿದೆ.

Infographics:ಶೇಕಡವಾರು ಮತ ಗಳಿಕೆ, ಅತಿ ಹೆಚ್ಚು ಸ್ಥಾನ RJD ಟಾಪ್Infographics:ಶೇಕಡವಾರು ಮತ ಗಳಿಕೆ, ಅತಿ ಹೆಚ್ಚು ಸ್ಥಾನ RJD ಟಾಪ್

ಈ ನಡುವೆ ಬಿಹಾರ ಚುನಾವಣೆಯಲ್ಲಿ ಅಬ್ಬರಿಸಿದ ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ರಾಷ್ಟ್ರೀಯ ಜನತಾ ದಳ 75, ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು, ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.

ಬಿಹಾರ ಚುನಾವಣೆಯಲ್ಲಿ ನೋಟಾ ಬಟನ್ ಒತ್ತಿದವರೆಷ್ಟು ಮಂದಿ?ಬಿಹಾರ ಚುನಾವಣೆಯಲ್ಲಿ ನೋಟಾ ಬಟನ್ ಒತ್ತಿದವರೆಷ್ಟು ಮಂದಿ?

Recommended Video

ದೀಪಾವಳಿ ಸಮಯದಲ್ಲಿ ಮೋದಿ ಮಾಡಿದ್ದಾದರೂ ಏನು? | Oneindia Kannada

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
Nitish Kumar will be the Chief Minister of Bihar for a fourth straight term, the NDA said today after a meeting of its legislators.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X