• search
 • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಬಹಮತ ಗಳಿಸಿದರೂ, ನಿತೀಶ್ ಮುಂದಿನ ಸಿಎಂ: ಅಮಿತ್

|

ಪಾಟ್ನಾ, ಅ. 18: ಎನ್ಡಿಎ ನೇತೃತ್ವದ ಮೈತ್ರಿಕೂಟ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ನೀಡಲಿದೆ. ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿ ಉತ್ತಮ ಪ್ರದರ್ಶನ ನೀಡಿದರೂ ನಿತೀಶ್ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನ್ಯೂಸ್ 18 ಜೊತೆ ಮಾತನಾಡಿದ ಅಮಿತ್ ಶಾ ಅವರು ನಿತೀಶ್ ಕುಮಾರ್ ಅವರು ಎನ್ಡಿಎ ಸಿಎಂ ಅಭ್ಯರ್ಥಿಯಾಗಿದ್ದು, ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದರು.

ಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿ

ಬಿಜೆಪಿ ಹೆಚ್ಚು ಸ್ಥಾನ ಗೆದ್ದರೆ, ಸೋತರೆ ಎಂಬ ಊಹೆಗಳು ಬೇಡ, ನಿತೀಶ್ ಅವರು ಸಿಎಂ ಅಭ್ಯರ್ಥಿ ಎಂದು ಒಮ್ಮೆ ಸಾರ್ವಜನಿಕವಾಗಿ ಘೋಷಿಸಿದ ಮೇಲೆ ಮುಗಿಯಿತು. ಕೊಟ್ಟ ಮಾತು ತಪ್ಪುವಂತಿಲ್ಲ. ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾದರೂ ಸಿಎಂ ಅಭ್ಯರ್ಥಿಯನ್ನು ಬದಲಾಯಿಸಲ್ಲ ಎಂದರು.

''ಲೋಕ ಜನಶಕ್ತಿ ಪಕ್ಷ ಹಾಗೂ ಮೈತ್ರಿಭಂಗದ ಬಗ್ಗೆ ಮಾತನಾಡಿದ ಅಮಿತ್, ಮೈತ್ರಿಧರ್ಮದ ಪ್ರಕಾರ ಎಲ್ ಜೆಪಿಗೂ ಸೂಕ್ತ ಅನುಪಾತದಲ್ಲೇ ಸೀಟು ಹಂಚಿಕೆ ಮಾಡಲಾಗಿತ್ತು. ಆದರೆ, ಒಮ್ಮತ ಮೂಡದ ಕಾರಣ ಹಿಂದೆ ಸರಿದಿದ್ದಾರೆ. ಅದು ಅವರ ನಿರ್ಣಯ, ಬಿಜೆಯದ್ದಲ್ಲ'' ಎಂದರು.

ಬಿಜೆಪಿ 121 ಹಾಗೂ ಜೆಡಿಯು 122 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಹಿಂದೂಸ್ತಾನಿ ಅವಾಂ ಮೋರ್ಚಾ ಹಾಗೂ ವಿಕಾಸ್ ಶೀಲ ಇನ್ಸಾನ್ ಪಾರ್ಟಿ ಜೊತೆಗೂ ಮೈತ್ರಿ ಹೊಂದಿದೆ.

ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ತಪ್ಪಿನಿಂದ ಅರಳುತ್ತಾ ಕಮಲ?

43 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

   Corona ರೋಗದ ಮೊದಲನೇ ಲಕ್ಷಣ ನೆಗಡಿ | Oneindia Kannada

   2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

   English summary
   Union home miniter Amit Shah on Saturday expressed confidence that the National Democratic Alliance (NDA) would win the upcoming Bihar elections hands-down and that Nitish Kumar would be the chief minister irrespective of which party in the alliance wins more seats.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X