ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್
ಪಟ್ನಾ, ಆಗಸ್ಟ್ 10: ಮಂಗಳವಾರ ಬಿಜೆಪಿಯನ್ನು ತೊರೆದು ರಾಷ್ಟ್ರೀಯ ಜನತಾದಳ ಮತ್ತು ಇತರ ವಿರೋಧ ಪಕ್ಷಗಳನ್ನು ಒಳಗೊಂಡಿರುವ ಹೊಸ ಮಹಾಘಟಬಂಧನ್ ಘೋಷಿಸಿದ ನಂತರ ನಿತೀಶ್ ಕುಮಾರ್ ಬುಧವಾರ ಮಧ್ಯಾಹ್ನ 2 ಗಂಟೆಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮೂಲಗಳ ಪ್ರಕಾರ, ಬಿಹಾರದಲ್ಲಿ ಹೊಸ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ನಾಲ್ಕು ಸಚಿವ ಸ್ಥಾನಗಳ ಜೊತೆಗೆ, ಕಾಂಗ್ರೆಸ್ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಸಹ ಕೋರಿದೆ ಎಂದು ಹೇಳಲಾಗಿದೆ.
"ಏಳು ಪಕ್ಷಗಳ ಮಹಾಘಟಬಂಧನ್ (ಮಹಾಮೈತ್ರಿಕೂಟ) ನಿಕಟವಾಗಿ ಕೆಲಸ ಮಾಡುತ್ತದೆ" ಎಂದು ನಿತೀಶ್ ಕುಮಾರ್ ಮಂಗಳವಾರ ರಾಜ್ಯಪಾಲರನ್ನು ಭೇಟಿಯಾದ ನಂತರ ಹೇಳಿದರು. ಅವರು ತಮ್ಮ ಪಕ್ಷವಾದ ಜನತಾ ದಳ ಸಂಯುಕ್ತ ಮತ್ತು ಬಿಜೆಪಿಯನ್ನು ಒಳಗೊಂಡಿರುವ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಒಂದು ಗಂಟೆಯ ನಂತರ, ನಿತೀಶ್ ಕುಮಾರ್ ತೇಜಸ್ವಿ ಯಾದವ್ ಮತ್ತು ಇತರ ವಿರೋಧ ಪಕ್ಷದ ನಾಯಕರೊಂದಿಗೆ ರಾಜ್ಯಪಾಲರ ಬಳಿಗೆ ವಾಪಸ್ ಹೋದರು, ಅವರ ಒಟ್ಟು ಬಲದ ಆಧಾರದ ಮೇಲೆ ಮುಂದಿನ ಸರ್ಕಾರವನ್ನು ರಚಿಸಲು ಆಹ್ವಾನಿಸಬೇಕು ಎಂದು ಕೇಳಿಕೊಂಡರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ
"ನಾನು ರಾಜೀನಾಮೆ ನೀಡಿದ್ದೇನೆ, ನನ್ನ ಎಲ್ಲಾ ಶಾಸಕರಿಗೆ ತಿಳಿಸಿದ್ದೇನೆ" ಎಂದು ನಿತೀಶ್ ಕುಮಾರ್ ರಾಜ್ಯಪಾಲರೊಂದಿಗಿನ ಭೇಟಿಯ ನಂತರ ಹೇಳಿದರು. ಒಂಬತ್ತು ವರ್ಷಗಳಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ದೂರಾಗಿದ್ದಾರೆ. ಶಾಸಕರ ಅಭಿಪ್ರಾಯದಂತೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ಇನ್ನು ಬಿಹಾರ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕೂಡ ಪ್ರತಿಕ್ರಿಯೆ ನೀಡಿದ್ದು, "ನಾನು ಬಿಹಾರದ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ. ಇದು ಜನತಾ ದಳ ಒಂದೇ ಪರಿವಾರವಾಗಿದ್ದ ದಿನಗಳ ಬಗ್ಗೆ ಯೋಚಿಸುವಂತೆ ಮಾಡಿದೆ. ಆರಂಭದ ದಿನಗಳಲ್ಲಿ ಜನತಾ ಪರಿವಾರ ದೇಶಕ್ಕೆ ಮೂವರು ಪ್ರಧಾನಿಗಳನ್ನು ನೀಡಿದೆ. ಕಿರಿಯರು ನಿರ್ಧರಿಸಿದರೆ ದೇಶದ ರಾಜಕೀಯದಲ್ಲಿ ಪರ್ಯಾಯ ರಾಜಕೀಯ ಪಕ್ಷವಾಗಿ ಬೆಳೆಯಬಹುದು" ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿ ಮಹಾಘಟಬಂಧನ್ ಬೆಂಬಲಿಸಿ ಬಿಹಾರದಲ್ಲಿ ಸರ್ಕಾರ ರಚಿನೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮೈತ್ರಿ ಮುರಿದುಕೊಂಡ ಬಗ್ಗೆ ಬಿಜೆಪಿ ಸಂಸದ ಸುಶೀಲ್ ಮೋದಿ ಪ್ರತಿಕ್ರಿಯೆ ನೀಡಿ, "ಬಿಜೆಪಿ ಜೊತೆಯಲ್ಲಿದ್ದಾಗ ನಿತೀಶ್ ಕುಮಾರ್ ಅವರಿಗೆ ಆರ್‌ಜೆಡಿ ಸಿಗುವ ಗೌರವ ನೀಡಲಿಲ್ಲ. ನಮಗೆ ಹೆಚ್ಚು ಸ್ಥಾನಗಳಿದ್ದರೂ ನಾವು ನಿತೀಶ್ ಕುಮಾರ್ ಅವರನ್ನು ಸಿಎಂ ಮಾಡಿದ್ದೆವು. ಅವರ ಪಕ್ಷವನ್ನು ಒಡೆಯಲು ನಾವು ಪ್ರಯತ್ನ ಮಾಡಿಲ್ಲ. ನಮಗೆ ದ್ರೋಹ ಮಾಡಿದವರನ್ನು ಮಾತ್ರ ಸುಮ್ಮನೆ ಬಿಡಲ್ಲ. ಮಹಾರಾಷ್ಟ್ರದಲ್ಲಿ, ಶಿವಸೇನೆ ನಮಗೆ ದ್ರೋಹ ಮಾಡಿತ್ತು ಮತ್ತು ಅದರ ಪರಿಣಾಮಗಳನ್ನು ಎದುರಿಸಿತು." ಎಂದು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications