ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ 7ನೇ ಬಾರಿ ಸಿಎಂ ಆಗಿರುವ ನಿತೀಶ್ ಕುಮಾರ್ ರಾಜಕೀಯ ಇತಿಹಾಸ

|
Google Oneindia Kannada News

ಪಾಟ್ನಾ, ನವೆಂಬರ್.11: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) ಜಯಭೇರಿ ಬಾರಿಸಿದ್ದು, ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಆಯ್ಕೆ ಆಗಿದ್ದಾರೆ. ರಾಜ್ಯದಲ್ಲಿ 7ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಎನ್ ಡಿಎ 125 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆದ್ದು, ಬಿಹಾರದ 37ನೇ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಪದಗ್ರಹಣ ಮಾಡಲಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.

ಬಿಹಾರದ ಮುಂದಿನ ಸಿಎಂ ಯಾರು:ಸುಶೀಲ್ ಮೋದಿ ಹೇಳಿದ್ದೇನು? ಬಿಹಾರದ ಮುಂದಿನ ಸಿಎಂ ಯಾರು:ಸುಶೀಲ್ ಮೋದಿ ಹೇಳಿದ್ದೇನು?

ಬಿಹಾರದಲ್ಲಿ ಮುಖ್ಯಮಂತ್ರಿ ಆಗಿ 69 ವರ್ಷದ ನಿತೀಶ್ ಕುಮಾರ್ ಈಗಾಗಲೇ ಮೂರು ಅವಧಿ ಪೂರ್ಣಗೊಳಿಸಿದ್ದಾರೆ. ನಾಲ್ಕನೇ ಅವಧಿಗೆ ಆಯ್ಕೆ ಆಗಿರುವ ಅವರ ಈ ಹಿಂದಿನ ಆಡಳಿತ ಮತ್ತು ಸರ್ಕಾರ ರಚನೆಯ ಹಿನ್ನೆಲೆ ಹೇಗಿತ್ತು ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಮೊದಲ ಬಾರಿ ಸಿಎಂ ಆಗಿ ಆಯ್ಕೆ ಆಗಿದ್ದು ಯಾವಾಗ?

ಮೊದಲ ಬಾರಿ ಸಿಎಂ ಆಗಿ ಆಯ್ಕೆ ಆಗಿದ್ದು ಯಾವಾಗ?

ಬಿಹಾರದಲ್ಲಿ ಮೊದಲ ಬಾರಿಗೆ 2000ರಲ್ಲಿ ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದರು. ಮಾರ್ಚ್.03, 2000ರಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಸರ್ಕಾರವು, ಬಹುಮತ ಸಾಬೀತುಪಡಿಸಲು ಆಗದೇ ಅಂದು ಒಂದೇ ವಾರದಲ್ಲಿ ಪತನಗೊಂಡಿತು. ನವೆಂಬರ್.24, 2005ರಲ್ಲಿ ಭಾರತೀಯ ಜನತಾ ಪಕ್ಷದ ಬೆಂಬಲದೊಂದಿಗೆ ಎರಡನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದರು.

3ನೇ ಅವಧಿ ಪೂರ್ಣಗೊಳಿಸುವಲ್ಲಿ ನಿತೀಶ್ ಕುಮಾರ್ ವಿಫಲ

3ನೇ ಅವಧಿ ಪೂರ್ಣಗೊಳಿಸುವಲ್ಲಿ ನಿತೀಶ್ ಕುಮಾರ್ ವಿಫಲ

ಬಿಹಾರದಲ್ಲಿ 2010ರ ನವೆಬಂರ್.26ರಂದು ಮೂರನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಮೂರನೇ ಬಾರಿ ಸಿಎಂ ಆದ ಅವರು ಅವಧಿ ಪೂರ್ಣಗೊಳಿಸುವುದಕ್ಕೆ ಸಾಧ್ಯವಾಗಲಿಲ್ಲ. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ನಿತೀಶ್ ಅವರ ಜೆಡಿಯು ಪಕ್ಷವು ಸೋಲು ಕಂಡ ಹಿನ್ನೆಲೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅವರ ಬದಲಿಗೆ ಜಿತನ್ ರಾಮ್ ಮಾಂಝಿರನ್ನು ಸಿಎಂ ಸ್ಥಾನಕ್ಕೇರಿಸಲಾಗಿತ್ತು. ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ 9 ತಿಂಗಳಿನಲ್ಲೇ ಮತ್ತೆ ನಿತೀಶ್ ಕುಮಾರ್ ಸಿಎಂ ಕುರ್ಚಿಗೆ ಏರಿದರು. ಫೆಬ್ರವರಿ.22, 2015ರಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದರು.

ಆರ್ ಜೆಡಿ ಮತ್ತು ಜೆಡಿಯು ಮೈತ್ರಿ ಸರ್ಕಾರ ರಚನೆ

ಆರ್ ಜೆಡಿ ಮತ್ತು ಜೆಡಿಯು ಮೈತ್ರಿ ಸರ್ಕಾರ ರಚನೆ

ಬಿಹಾರ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳದ ಜೊತೆಗೆ ಜೆಡಿಯು ಮೈತ್ರಿಕೂಟ ರಚಿಸಿಕೊಂಡು ಹೊಸ ಸರ್ಕಾರವನ್ನು ಅಸ್ತಿತ್ವಕ್ಕೆ ತರಲಾಗಿತ್ತು. 2015ರ ನವೆಂಬರ್.20ರಂದು ಐದನೇ ಬಾರಿಗೆ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಅಧಿಕಾರಕ್ಕೇರಿದರು. ಅಂದು ಅತ್ಯಂತ ಯುವ ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದರು. 2017ರಲ್ಲಿ ರಾಷ್ಟ್ರೀಯ ಜನತಾದಳದ ಜೊತೆಗಿನ ಮೈತ್ರಿ ಕಡಿದುಕೊಂಡ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ರಾಜೀನಾಮೆ ಮತ್ತು ಪದಗ್ರಹಣದ ನಡುವೆ ಒಂದೇ ದಿನ ಅಂತರ!

ರಾಜೀನಾಮೆ ಮತ್ತು ಪದಗ್ರಹಣದ ನಡುವೆ ಒಂದೇ ದಿನ ಅಂತರ!

ರಾಷ್ಟ್ರೀಯ ಜನತಾ ದಳದ ಜೊತೆಗೆ ವೈಮನಸ್ಸಿನಿಂದ ಜೆಡಿಯು ಮೈತ್ರಿ ಕಡಿದುಕೊಂಡು 2017ರಲ್ಲಿ ಸರ್ಕಾರ ಪತನಗೊಂಡಿತು. ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿದರು. ಅದಾಗಿ ಮರುದಿನವೇ ಮತ್ತೊಮ್ಮೆ ಬಿಜೆಪಿ ಬೆಂಬಲದೊಂದಿಗೆ ಆರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಜೊತೆಗೆ 2020ರಲ್ಲಿ ಚುನಾವಣೆ ಎದುರಿಸಿದ ನಿತೀಶ್ ಕುಮಾರ್, ಮತದಾರರ ಬೆಂಬಲ ಗಳಿಸಿಕೊಂಡಿದ್ದು ಏಳನೇ ಬಾರಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಅಣಿಯಾಗಿದ್ದಾರೆ.

ಬಿಹಾರ ಮತದಾರರು ನೀಡಿರುವ ತೀರ್ಪಿನ ವಿವರ

ಬಿಹಾರ ಮತದಾರರು ನೀಡಿರುವ ತೀರ್ಪಿನ ವಿವರ

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಈ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಅದರಲ್ಲಿ ರಾಷ್ಟ್ರೀಯ ಜನತಾ ದಳ 75, ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.

Recommended Video

ಹೆಂಡತಿಯ challenge ಒಪ್ಪಿ ತೇಜ್ ಎನ್ ಮಾಡಿದ್ರು ಗೊತ್ತಾ ? | Oneindia Kannada

English summary
Now Nitish Kumar Ready For 7th Oath As Bihar CM. Here's A History Of Past Instances.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X