• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಾಟ್ನಾ: ಏಮ್ಸ್ ಆಸ್ಪತ್ರೆಯ 384 ವೈದ್ಯರು ಆರೋಗ್ಯ ಸಿಬ್ಬಂದಿಗೆ ಕೊರೊನಾವೈರಸ್!

|
Google Oneindia Kannada News

ಪಾಟ್ನಾ, ಏಪ್ರಿಲ್ 22: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ 384 ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಬಿಹಾರದಲ್ಲಿ ಮಂಗಳವಾರ ಕೊವಿಡ್-19 ಸೋಂಕಿನಿಂದ 51 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1841ಕ್ಕೆ ಏರಿಕೆಯಾಗಿದೆ. ಈ ಪೈಕಿ ಪಾಟ್ನಾದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳ ಜೊತೆ ಸಾವಿನ ಪ್ರಕರಣಗಳ ವರದಿಯಾಗಿವೆ. ಪಾಟ್ನಾದಲ್ಲಿ 11 ಮತ್ತು ಗಯಾದಲ್ಲಿ 11 ಮಂದಿ ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.

ಮಾಜಿ ಯೋಧನ ಪ್ರಾಣ ಕಸಿದುಕೊಂಡಿತು ಆರೋಗ್ಯ ಸಚಿವರ ಆಸ್ಪತ್ರೆ ಭೇಟಿ ಕಾರ್ಯಕ್ರಮಮಾಜಿ ಯೋಧನ ಪ್ರಾಣ ಕಸಿದುಕೊಂಡಿತು ಆರೋಗ್ಯ ಸಚಿವರ ಆಸ್ಪತ್ರೆ ಭೇಟಿ ಕಾರ್ಯಕ್ರಮ

ಭಗಲ್ಪುರ್ 5, ಜೆಹನ್ ಬಾಗ್ ಮತ್ತು ಪಶ್ಚಿಮ ಚಂಪರಣ 4, ಔರಂಗಬಾದ್, ಮತ್ತು ಮಂಗೇರ್ 3, ದರ್ಬಾಂಗ್ ಹಾಗೂ ಮುಜಾಫರ್ ಪುರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅರ್ವಾಲಾ, ಬಂಕಾ, ಭೋಜ್ಪುರ್, ಲಖಿಸರಾಯಿ ಮತ್ತು ನಾವಾಡದಲ್ಲಿ ಒಬ್ಬರು ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ.

ಬಿಹಾರದಲ್ಲಿ ಕೊರೊನಾವೈರಸ್:

ರಾಜ್ಯದಲ್ಲಿ ಒಂದೇ ದಿನ 10455 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,42,059ಕ್ಕೆ ಏರಿಕೆಯಾಗಿದೆ. ಮಂಗಳವಾರ ಬಿಹಾರದಲ್ಲಿ 93164 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದ್ದು, ಈವರೆಗೂ 61,68,593 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಕೊರೊನಾವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವುದಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೂ ರಾತ್ರಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.

ಪಂಚಾಯತ್ ಚುನಾವಣೆ ಮುಂದೂಡಿಕೆ:

ರಾಜ್ಯ ಮತ್ತು ದೇಶಾದ್ಯಂತ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ಬಿಹಾರದ ವಿರೋಧ ಪಕ್ಷಗಳು ರಾಜ್ಯದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಯನ್ನು ಮುಂದೂಡಬೇಕೆಂದು ಕರೆ ನೀಡಿವೆ.

English summary
Patna: 384 AIIMS Doctors And Health Workers Tested Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X