• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅ.28ರಂದು ಬಿಹಾರದ ಮೂರು ಕಡೆಗಳಲ್ಲಿ ಪ್ರಧಾನಿ ಮೋದಿ ಪ್ರಚಾರ

|

ಪಾಟ್ನಾ, ಅಕ್ಟೋಬರ್.27: ಬಿಹಾರ ವಿಧಾನಸಭಾ ಚುನಾವಣಾ ಆಖಾಡದಲ್ಲಿ ಬುಧವಾರ ಎರಡು ವಿಶೇಷತೆಗಳಿವೆ. ಒಂದು ಕಡೆಯಲ್ಲಿ 71 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನೊಂದು ಕಡೆಯಲ್ಲಿ ಎರಡನೇ ಬಾರಿ ರಾಜ್ಯದಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಬಿಹಾರದ ಮೂರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು, ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದರ್ಭಾಂಗ್, ಮುಜಾಫರ್ ಪುರ್ ಮತ್ತು ಪಾಟ್ನಾದಲ್ಲಿ ಎನ್ ಡಿಎ ಮೈತ್ರಿಕೂಟದ ಪರವಾಗಿ ಮತಯಾಚನೆ ನಡೆಸಲಿದ್ದಾರೆ.

ಬಿಹಾರದ ಜನರಿಗೆ ಸರ್ಕಾರಿ ಉದ್ಯೋಗ ಏಕೆ ಸಿಗುತ್ತಿಲ್ಲ: ಮೋದಿ

ಬಿಹಾರ ವಿಧಾನಸಭೆ ಚುನಾವಣೆ ಘೋಷಣೆ ಬಳಿಕ ಮೊದಲ ಬಾರಿಗೆ ಕಳೆದ ಅಕ್ಟೋಬರ್.23ರಂದು ಸಸಾರಮ್, ಗಯಾ, ಭಗಲ್ಪುರ್ ನಲ್ಲಿ ಪ್ರಧಾನಿ ಮೋದಿಯವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಮುಂದಿನ ಬಾರಿ ನವೆಂಬರ್.03ರಂದು ಛಪ್ರಾ, ಪೂರ್ವ ಚಂಪಾರಣ್, ಸಮಸ್ತಿಪುರ್ ನಲ್ಲಿ ರ್ಯಾಲಿ ಮತ್ತು ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಬುಧವಾರ 71 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್.28ರ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗದವರು ಸೇರಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ. 71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

English summary
Prime Minister Narendra Modi Election Rallies In Darbhanga, Muzaffarpur And Patna On Oct.28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X