ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್-19 ಮುನ್ನೆಚ್ಚರಿಕೆ ಜೊತೆಗೆ ಮತದಾನಕ್ಕೆ ಪ್ರಧಾನಿ ಕರೆ

|
Google Oneindia Kannada News

ಪಾಟ್ನಾ, ಅಕ್ಟೋಬರ್.28: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಪ್ರಜೆಗಳು ಕಡ್ಡಾಯವಾಗಿ ಭಾಗಿಯಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

"ಬಿಹಾರದಲ್ಲಿ ಮೊದಲ ಹಂತದ ಚುನಾವಣೆಯಿದೆ. ಎಲ್ಲರೂ ಮತದಾನ ಮಾಡಬೇಕು ಎನ್ನುವುದು ನನ್ನ ಆಗ್ರಹವಾಗಿದೆ. ಕೊವಿಡ್-19 ಸೋಂಕು ಹರಡುವಿಕೆ ಆತಂಕದ ನಡುವೆ ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯನ್ನು ಪ್ರತಿಯೊಬ್ಬರು ಆಚರಿಸಬೇಕು. ಇದರ ಜೊತೆಗೆ ಕೊರೊನಾವೈರಸ್ ಸೋಂಕಿನ ಕುರಿತು ಜಾಗೃತಿ ವಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

 Bihar Election 2020 Live Updates: ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಲು ಪ್ರಧಾನಿ ಕರೆ Bihar Election 2020 Live Updates: ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಲು ಪ್ರಧಾನಿ ಕರೆ

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್.28ರ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗದವರು ಸೇರಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

PM Urge All Voters to Ensure Their Participation In This Festival Of Democracy

1066 ಅಭ್ಯರ್ಥಿಗಳ ಭವಿಷ್ಯ:

71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಗಯಾ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಎಂದರೆ 27 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಕಾಟೋರಿಯಾ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಎಂದರೆ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂಬುದು ಚುನಾವಣಾ ಆಯೋಗವು ನೀಡಿದ ಅಂಕಿ-ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

PM Urge All Voters to Ensure Their Participation In This Festival Of Democracy

ಕೊರೊನಾವೈರಸ್ ನಿಯಂತ್ರಣ ಕ್ರಮ:

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ನಡುವೆ ಸುರಕ್ಷಿತವಾಗಿ ಮತದಾನ ಪ್ರಕ್ರಿಯೆ ನಡೆಸುವುದಕ್ಕೆ ಚುನಾವಣಾ ಆಯೋಗವು ಮಾರ್ಗಸೂಚಿ ಹೊರಡಿಸಿದೆ. ಒಂದು ಮತಗಟ್ಟೆಯಲ್ಲಿ 1600 ರಿಂದ 1000 ಮತದಾರರಿಗೆ ಹಕ್ಕು ಚಲಾಯಿಸುವುದಕ್ಕಷ್ಟೇ ಅನುಮತಿ ನೀಡಲಾಗಿದೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ನ್ನು ಸ್ಯಾನಿಟೈಸ್ ಮಾಡುವುದು. ಕಡ್ಡಾಯವಾಗಿ ಮಾಸ್ಕ್ ಧರಿಸವುದು, ಥರ್ಮಲ್ ಸ್ಕ್ಯಾನಿಂಗ್ ಮತ್ತು ಸೋಪು ಮತ್ತು ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಮತದಾನದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕೆ ಕಡ್ಡಾಯಗೊಳಿಸಲಾಗಿದೆ.

English summary
Bihar Assembly Election 2020: PM Narendra Modi Urge All Voters to Ensure Their Participation In This Festival Of Democracy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X