• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅ.23ರಂದು ಬಿಹಾರ ಪ್ರಚಾರದ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ

|

ಪಾಟ್ನಾ, ಅಕ್ಟೋಬರ್.22: ಬಿಹಾರ ವಿಧಾನಸಭಾ ಚುನಾವಣಾ ಕಣ ಶುಕ್ರವಾರದಿಂದ ಮತ್ತಷ್ಟು ರಂಗು ಪಡೆದುಕೊಳ್ಳಲಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾದ ಮರುದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ.

ಬಿಹಾರದಲ್ಲಿ ಶುಕ್ರವಾರ ಮೂರು ಕಡೆಗಳಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಭರ್ಜರಿ ರ್ಯಾಲಿ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಮೂರೂ ಕಡೆಗಳಲ್ಲಿ ಭಾಷಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಬಿಹಾರ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ)ದ ಅಭ್ಯರ್ಥಿಗಳ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 12 ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಬಿಹಾರ ಚುನಾವಣೆಯ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.

ಪ್ರತಿ ಹಂತದಲ್ಲಿ ನಾಲ್ಕು ಕಡೆಗಳಲ್ಲಿ ಪ್ರಚಾರ:

ಬಿಹಾರ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ಘೋಷಿಸಲಾಗಿದೆ. ಪ್ರತಿ ಹಂತದಲ್ಲೂ ಪ್ರಧಾನಮಂತ್ರಿ ನಾಲ್ಕು ಕಡೆಗಳಲ್ಲಿ ಚುನಾವಣಾ ಪ್ರಚಾರ ಮತ್ತು ರ್ಯಾಲಿಗಳನ್ನು ನಡೆಸಲಿದ್ದು, ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೊದಲ ಬಾರಿಗೆ ಅಕ್ಟೋಬರ್.23ರಂದು ಸಸಾರಮ್, ಗಯಾ, ಭಗಲ್ಪುರ್ ನಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.

ಅಕ್ಟೋಬರ್.28ರಂದು ದರ್ಭಂಗಾ, ಮುಜಾಫರ್ ಪುರ್ ಮತ್ತು ಪಾಟ್ನಾದಲ್ಲಿ ಪ್ರಧಾನಿ ಮೋದಿ ರ್ಯಾಲಿ ನಡೆಸಲಿದ್ದಾರೆ. ನವೆಂಬರ್.03ರಂದು ಛಪ್ರಾ, ಪೂರ್ವ ಚಂಪಾರಣ್, ಸಮಸ್ತಿಪುರ್ ನಲ್ಲಿ ಜನರನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.

English summary
Prime Minister Narendra Modi To Begin His Campaign For Bihar Elections 2020 From Nov.23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X