ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಟ್ನಾ ಹೈಕೋರ್ಟ್ ನಿಂದ ರಾಹುಲ್ ಗಾಂಧಿಗೆ ಜಾಮೀನು

|
Google Oneindia Kannada News

ಪಾಟ್ನಾ, ಜುಲೈ 6: ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹಾಕಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪಟ್ನಾ ಹೈಕೋರ್ಟ್‌ನಿಂದ ಜಾಮೀನು ದೊರೆತಿದೆ.

ಇದೇ ಏಪ್ರಿಲ್ ನಲ್ಲಿ ಬಿಜೆಪಿ ಮುಖಂಡ ಹಾಗೂ ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ಮೊಕದ್ದಮೆಯನ್ನು ಹೂಡಿದ್ದರು. ಕರ್ನಾಟಕದಲ್ಲಿ ಚುನಾವಣೆ ಸಂದರ್ಭ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದರು.

 ಬಿಜೆಪಿ, ಆರೆಸ್ಸೆಸ್ ವಿರುದ್ಧ 10 ಪಟ್ಟು ಉತ್ಸಾಹದೊಂದಿಗೆ ಹೋರಾಡುತ್ತೇನೆ: ರಾಹುಲ್ ಗಾಂಧಿ ಬಿಜೆಪಿ, ಆರೆಸ್ಸೆಸ್ ವಿರುದ್ಧ 10 ಪಟ್ಟು ಉತ್ಸಾಹದೊಂದಿಗೆ ಹೋರಾಡುತ್ತೇನೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ, ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಹಾಗೂ ಐಪಿಎಲ್ ನ ಮಾಜಿ ಕಮಿಷನರ್ ಲಲಿತ್ ಮೋದಿಯವರನ್ನು ಉದ್ದೇಶಿಸಿ, ಏಕೆ ಎಲ್ಲಾ ಕಳ್ಳರಿಗೂ ಮೋದಿ ಉಪನಾಮ ಇರುತ್ತದೆ ಎಂದು ವ್ಯಂಗ್ಯವಾಗಿ ಹೇಳಿಕೆ ನೀಡಿದ್ದರು.

Rahul gandhi got bail in sushil kumar modi defamation case

ಇದನ್ನು ಖಂಡಿಸಿ ಸುಶೀಲ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ರಾಹುಲ್ ಗಾಂಧಿ, ಮೋದಿ ಉಪನಾಮವನ್ನಿಟ್ಟುಕೊಂಡ ಎಲ್ಲರ ಭಾವನೆಗಳಿಗೂ ಧಕ್ಕೆ ಉಂಟು ಮಾಡಿದ್ದಾರೆ ಎಂದು ಹೇಳಿದ್ದರು. ಇಂದು ಬೆಳಿಗ್ಗೆ ಇದೇ ವಿಚಾರವಾಗಿ ರಾಹುಲ್ ಗಾಂಧಿ, ತಾವು ಪಾಟ್ನಾ ಹೈ ಕೋರ್ಟ್ ಗೆ ಮಧ್ಯಾಹ್ನ 2 ಗಂಟೆಗೆ ಹಾಜರಾಗುತ್ತಿರುವುದಾಗಿ ಟ್ವೀಟ್ ಮಾಡಿದ್ದರು. ಇದೀಗ ರಾಹುಲ್ ಗಾಂಧಿ ಅವರಿಗೆ ಜಾಮೀನು ದೊರೆತಿದೆ.

English summary
Rahul Gandhi got bail by Patna Court in connection with a defamation case filed by Bihar Deputy Chief Minister Sushil Modi. He filed a case for Gandhi's remark 'why all thieves have Modi surname?'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X