ಮತ ಕೇಳಿ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು

ಪಾಟ್ನಾ, ಅಕ್ಟೋಬರ್.28: ಬಿಹಾರ ವಿಧಾನಸಭಾ ಚುನಾವಣೆಯ ಮೊದಲನೇ ಹಂತದ ಮತದಾನ ಪ್ರಕ್ರಿಯೆ ನಡುವೆ ಮಹಾಘಟಬಂಧನ್ ಗೆ ಮತ ನೀಡಿ ಎಂದು ಟ್ವೀಟ್ ಮಾಡಿದ ಸಂಸದ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.

ಮೊದಲ ಹಂತದಲ್ಲಿ 71 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ಪಕ್ಷದ ಪರ ಮತ ನೀಡುವಂತೆ ಕೋರುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

"ಈ ಬಾರಿ ಉದ್ಯೋಗ ಸೃಷ್ಟಿ, ರೈತರು ಮತ್ತು ಕಾರ್ಮಿಕರ ಉದ್ಧಾರಕ್ಕಾಗಿ ಮಹಾಘಟಬಂಧನ್ ಗೆ ನಿಮ್ಮ ಮತೆ ನೀಡಿ. ಬಿಹಾರದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವ ನಿಮಗೆಲ್ಲ ಶುಭಾಷಯಗಳು" ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು.

 Rahul Gandhi Request To Vote For Mahagathbandhan: BJP Filed Complaint To Election Commission

71 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್.28ರ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗದವರು ಸೇರಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ. 71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+